ಮಂಡ್ಯ

'ಸುವರ್ಣ ಗ್ರಾಮ'ದಿಂದ ಸರ್ವಾಂಗೀಣ ಅಭಿವೃದ್ಧಿ'

Published On :

ಭಾರತೀನಗರ: ಸುವರ್ಣ ಗ್ರಾಮೋದಯ ಯೋಜನೆಯ ಮೂಲಕ ಹಲವು ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದಾಗಿ ಶಾಸಕಿ ಕಲ್ಪನಾ ಸಿದ್ದರಾಜು ತಿಳಿಸಿದರು.
ಸಮೀಪದ ಮೆಳ್ಳಹಳ್ಳಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿ 1,47 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿ, ಭಾರತೀನಗರ ಹಾಗೂ ಮೆಳ್ಳಹಳ್ಳಿ ಗ್ರಾಮಗಳಲ್ಲಿ ಈ ಯೋಜನೆಯ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದರು.  
ಮುಂದಿನ ವಿಧಾನಸಭಾ ಚುನಾವಣೆಗೆ ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್‌ದಿಂದ ಟಿಕೆಟ್ ನೀಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಕಾರ್ಯಕರ್ತರು ಯಾವುದೇ ಗೊಂದಲವನ್ನಿಟ್ಟುಕೊಳ್ಳದೆ ಪಕ್ಷ ಸಂಘಟನೆಗೆ ಮುಂದಾಗಬೇಕೆಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಬಿ.ರಾಮಕೃಷ್ಣ ಮಾತನಾಡಿ, ಶಾಸಕಿ ಕಲ್ಪನಾ ಸಿದ್ದರಾಜು ಅವರು ಹೆಣ್ಣುಮಗಳಾದರೂ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಅಭಿವೃದ್ಧಿ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇವರು ಕ್ಷೇತ್ರಕ್ಕೆ ಬೇಕು ಬೇಡ ಎಂಬುವುದನ್ನು ಕಾರ್ಯಕರ್ತರು ನಿರ್ಧರಿಸಲಿ ಎಂದರು.
ಇದೇ ಸಂದರ್ಭದಲ್ಲಿ ತಾಪಂ ಸದಸ್ಯರಾದ ಎ.ಎಸ್. ರಾಜೀವ್, ಜ್ಯೋತಿನಿಂಗೇಗೌಡ, ಗ್ರಾಪಂ ಅಧ್ಯಕ್ಷ ವೆಂಕಟೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಯುವ ಘಟಕ ಅಧ್ಯಕ್ಷ ಅಣ್ಣೂರು ನವೀನ್, ಮುಖಂಡರಾದ ಮೆಳ್ಳಹಳ್ಳಿ ಹೊನ್ನೇಗೌಡ, ಚಿಕ್ಕತಿಮ್ಮೇಗೌಡ, ಮರಿಮಾದೇಗೌಡ, ಗ್ರಾಪಂ ಸದಸ್ಯರಾದ ಲಕ್ಷ್ಮಿಮಂಜುಳಾಬೋರೇಗೌಡ, ಚಿಕ್ಕವೆಂಕಟೇಗೌಡ, ಪುಟ್ಟರಾಮು, ಶ್ರೀನಿವಾಸ್, ಮಾಜಿ ಉಪಾಧ್ಯಕ್ಷ ನಾಗಲಿಂಗಯ್ಯ, ಮಣಿಗೆರೆ ಪ್ರಕಾಶ್, ಪಿಡಿಒ ಅಧಿಕಾರಿ ಮಲ್ಲೇಶ್, ಎಂಜಿನಿಯರ್ ನರಸಿಂಹಮೂರ್ತಿ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.