ಮಂಡ್ಯ

ಚೆಸ್ಕಾಂಗೆ ಬೀಗ ಜಡಿದು ಪ್ರತಿಭಟನೆ

Published On :

ಭಾರತೀನಗರ: ಚೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಕುರಿಕೆಂಪನದೊಡ್ಡಿ, ದೇವರಹಳ್ಳಿ ಹಾಗೂ ಗರಭೀ ಕಾಲೋನಿಯ ನಿವಾಸಿಗಳು ಚೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಅಸಮರ್ಪಕ ವಿದ್ಯುತ್‌ನಿಂದ ಗ್ರಾಮಗಳಲ್ಲಿ ಕುಡಿಯಲು ನೀರಿಲ್ಲದೆ ಪರಿತಪಿಸುವಂತಾಗಿದೆ. ವಿದ್ಯುತ್ ಯಾವ ಸಮಯದಲ್ಲಿ ಬರುತ್ತದೆ ಮತ್ತು ಹೋಗುತ್ತದೆ ಎಂಬುವುದೇ ಗೊತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯುಂಟಾಗುತ್ತಿದೆ. ಆದ್ದರಿಂದ ಕುಡಿಯುವ ನೀರು ಹಾಗೂ ವ್ಯವಸಾಯದ ಬೋರ್ವೆಲ್‌ಗೆ ಪ್ರತ್ಯೇಕವಾಗಿ ಟ್ರ್ಯಾನ್ಸ್‌ಫಾರಂಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿದರು.
ಈ ಹಿಂದೆ ದೊಡ್ಡರಸಿನಕರೆಯ ಮೂಲಕ ಎಫ್-5 ಲೈನ್‌ನಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿತ್ತು. ಆದರೆ ಇತ್ತೀಚಿಗೆ ಹನುಮಂತನಗರದಿಂದ ಎಫ್-2 ಲೈನ್‌ನಿಂದ ತಮ್ಮ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ದಿನದಿಂದ ಹಿಡಿದು ಇಲ್ಲಿಯವರೆವಿಗೂ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗಿಲ್ಲವೆಂದು ಹರಿಹಾಯ್ದರು.
ಗ್ರಾಮದಲ್ಲಿ ಟ್ರಾನ್ಸ್‌ಫಾರಂನಿಂದ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡು ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜು ಎಂಬ ವ್ಯಕ್ತಿಗೆ ಕಾಲು ಸುಟ್ಟುಹೋಗಿದ್ದರೂ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿಲ್ಲವೆಂದು ಕಿಡಿಕಾರಿದರು.
ರಾತ್ರಿ 6 ರಿಂದ ಬೆ.6 ರವರೆಗೆ ಸಂಪೂರ್ಣ ವಿದ್ಯುತ್ ಪೂರೈಕೆ ಮಾಡಬೇಕು. ಇಲ್ಲದೆ ಹೋದಲ್ಲಿ ಉಗ್ರಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಎಇ, ಎಇಇರವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.
ಪ್ರತಿಭಟನೆಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೌರಮ್ಮ, ಮಾಜಿ ಉಪಾಧ್ಯಕ್ಷೆ ಪುಟ್ಟತಾಯಮ್ಮ, ಮುಖಂಡರಾದ ರಮೇಶ್, ರಾಮಲಿಂಗು, ಶಿವಯ್ಯ, ಮಂಜುನಾಥ್, ಶಿವಲಿಂಗೇಗೌಡ, ರವಿ, ಸಿದ್ದರಾಜು, ಸಚಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.