ಮಂಡ್ಯ

ಬಿಪಿಎಲ್ ಕಾರ್ಡು ವಿಳಂಬ: ಯುವ ಕಾಂಗ್ರೆಸ್ ಪ್ರತಿಭಟನೆ

Published On :

ಮಂಡ್ಯ: ಬಿಪಿಎಲ್ ಕಾರ್ಡು ವಿತರಣೆಯಲ್ಲಿ ವಿಳಂಬ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಸ್.ಚಿದಂಬರ್ ನೇತೃತ್ವದಲ್ಲಿ ಕಾರ್ಯಕರ್ತರು ಇಲಾಖೆ ಕಚೇರಿ ಎದುರು ರಾಜ್ಯ ಸರ್ಕಾರ ಹಾಗೂ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇಲಾಖೆಯಿಂದ ಸಾರ್ವಜನಿಕರಿಗೆ ಬಿಪಿಎಲ್ ಕಾರ್ಡು ವಿತರಣೆ ವಿಳಂಬ ಆಗುತ್ತಿರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ. ಕೂಡಲೇ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಪದಾರ್ಥಗಳಿಗೆ  ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ. ಸೀಮೆಣ್ಣೆ, ಸಕ್ಕರೆ ವಿತರಣೆ ಸಂದರ್ಭದಲ್ಲಿ ಪ್ರತಿ ಕೆಜಿಗೆ 50 ಪೈಸೆ ಹೆಚ್ಚು ಪಡೆಯುತ್ತಿದ್ದಾರೆ ಎಂದು ದೂರಿದರು.
ಯಾವುದೇ ನ್ಯಾಯ ಬೆಲೆ ಅಂಗಡಿಗಳಲ್ಲಿ ದರಪಟ್ಟಿ ಹಾಗೂ ಸ್ಟಾಕ್‌ಲಿಸ್ಟ್ ಅಳವಡಿಸಿಲ್ಲ. ಪಡಿತರ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಕೂಡಲೇ ಸರಿಪಡಿಸಿ ಜನರಿಗೆ ನ್ಯಾಯ ದೊರಕಿಸಿಕೊಡುವಂತೆ ಪ್ರತಿಭಟನಾಕಾರರು ಈ  ಸಂದರ್ಭದಲ್ಲಿ ಆಗ್ರಹಿಸಿದರು. ಯುವ ಕಾಂಗ್ರೆಸ್ ಮುಖಂಡರಾದ ಅರವಿಂದ್, ಸತೀಶ್‌ಚಂದ್ರ, ಚಂದ್ರಶೇಖರ್, ಶರತ್, ಮುಜಾಹಿದ್ ಮತ್ತಿತರರು ಪ್ರತಿಭಟನೆ ನೇತೃತ್ವವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.