ಮಂಡ್ಯ

'ಟಿವಿ, ಸಿನಿಮಾ ಅನುಕರಣೆ ಬೇಡ '

Published On :

ಭಾರತೀನಗರ:  ಟಿ.ವಿ. ಮತ್ತು ಸಿನಿಮಾ ಪಾತ್ರಗಳ ಅನುಕರಣೆಯಲ್ಲಿ ತೊಡಗಿರುವ ಮಕ್ಕಳ ಬಗ್ಗೆ ಪೋಷಕರು ಎಚ್ಚರ ವಹಿಸಬೇಕೆಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು.
ಇಲ್ಲಿನ ಸ್ನೇಹ ವಿದ್ಯಾಸಂಸ್ಥೆ ಶಾಲಾ ವಾರ್ಷಿಕೋತ್ಸವ ಹಾಗೂ ಪೋಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನೆಯೇ ಮೊದಲ ಪಾಠ ಶಾಲೆ.  ಆದ್ದರಿಂದ ತಂದೆ-ತಾಯಿಗಳು ಮಾನವೀಯ ಮೌಲ್ಯಗಳನ್ನು ತಮ್ಮ ಮಕ್ಕಳಿಗೆ ತಿಳಿ ಹೇಳಿ ಗುರು-ಹಿರಿಯರಿಗೆ ಗೌರವ ಕೊಡುವಂತಹ ಸಂಸ್ಕೃತಿ ರೂಪಿಸಬೇಕೆಂದರು.
ಮಕ್ಕಳಲ್ಲಿ ಮಾನಸಿಕ ಮತ್ತು ಭೌತಿಕಮಟ್ಟ ಬೆಳೆಸುವ ಜವಾಬ್ದಾರಿ ಪೋಷಕರದ್ದಾಗಿರುತ್ತದೆ. ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿ ನವಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಎಷ್ಟು ಕಲಿತರೂ ಸಾಲದು. ಶಿಕ್ಷಕರು ಪ್ರತಿಯೊಂದು ಮಗುವಿನ ಬಗ್ಗೆ ಗಮನ ನೀಡಿ ಉತ್ತಮ ಶಿಕ್ಷಣ ಪಡೆಯುವಂತೆ ಕಾರ್ಯತಂತ್ರ ರೂಪಿಸಬೇಕೆಂದು ಕರೆ ನೀಡಿದರು. ಪ್ರತಿ ಮಗು ಕೂಡ ಶಿಕ್ಷಣ ಪಡೆಯಬೇಕೆಂಬ ಹಿತದೃಷ್ಟಿಯಿಂದ ಸರ್ಕಾರ ವರ್ಷದಿಂದ ವರ್ಷಕ್ಕೆ ಸಾವಿರಾರು ಕೋಟಿ ಹಣ ಶಿಕ್ಷಣಕ್ಕಾಗಿ ಖರ್ಚು ಮಾಡುತ್ತಿದೆ. ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ಮಾಡಿದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ವಿವರಿಸಿದರು.
ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಸಬ್‌ಇನ್ಸ್‌ಪೆಕ್ಟರ್ ಪಿ.ಜಗದೀಶ್ ಹಾಗೂ ಸ್ನೇಹ ವಿದ್ಯಾಸಂಸ್ಥೆಯ ಅಧ್ಯಕ್ಷೆ ಎಂ.ಆರ್. ಶಶಿಕಲಾ ದಾಸೇಗೌಡ ಬಹುಮಾನ ವಿತರಿಸಿದರು. ಸಂಸ್ಥೆಯ ಸಂಸ್ಥಾಪಕ ದಾಸೇಗೌಡ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಬಿ.ಎಂ. ನಂಜೇಗೌಡ, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.