ವಿಭಾಗಮಟ್ಟದ ಯುವಜನ ಮೇಳ
ಮಂಡ್ಯ: ಮೈಸೂರಿನ ಕಲಾಮಂದಿರದಲ್ಲಿ ಫೆ.21, 22 ರಂದು ಮೈಸೂರು ವಿಭಾಗ ಮಟ್ಟದ ಯುವಜನ ಮೇಳವನ್ನು ಏರ್ಪಡಿಸಲಾಗಿದೆ. ತಾಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಕಳೆದ ಫೆ.10 ಮತ್ತು 11ರಂದು ನಡೆದ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವಿಜೇತರಾದ ಕಲಾವಿದರು ಮೈಸೂರಿನಲ್ಲಿ ನಡೆಯುವ ವಿಭಾಗಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಸ್ಪರ್ಧಿಗಳು ಫೆ.20ರಂದು ಸಂಜೆ 7 ಗಂಟೆಯೊಳಗಾಗಿ ಮೈಸೂರಿನ ಕಲಾಮಂದಿರದಲ್ಲಿ ವರದಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಸ್ಪರ್ಧಿಗಳು ಲಘು ಹಾಸಿಗೆ, ಹೊದಿಕೆ, ಬೀಗದ ಕೈ ಇತ್ಯಾದಿ ಅಗತ್ಯ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಲು ಕೋರಿದೆ. ಹೆಚ್ಚಿನ ವಿವರಗಳಿಗಾಗಿ ದೂ-08232-224725ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವಜನ ಸೇವಾಧಿಕಾರಿ ಮಂಜುಳಾ ತಿಳಿಸಿದ್ದಾರೆ.
ಜೆಡಿಎಸ್ ನಗರ ಘಟಕಕ್ಕೆ ಆಯ್ಕೆ
ಮಂಡ್ಯ: ಜಾತ್ಯತೀತ ಜನತಾದಳ (ಜೆಡಿಎಸ್) ನಗರ ಘಟಕದ ಕಾರ್ಯದರ್ಶಿಗಳನ್ನಾಗಿ ನಗರದ ಕ್ರಿಶ್ಚಿಯನ್ ಕಾಲೋನಿಯ ಡಿ.ಚಾರ್ಲ್ಸ್ಬೆನ್, ಹಾಲಹಳ್ಳಿ ಕೆರೆಯ ಎಂ.ಎಸ್. ಮಹೇಂದ್ರ ಅವರನ್ನು ನೇಮಕ ಮಾಡಿ ಜಿಲ್ಲಾ ನಗರ ಘಟಕದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

