ಮಂಡ್ಯ

ಕಾಲೇಜುಗಳಲ್ಲಿ ಇನ್ನು ಸಮವಸ್ತ್ರ!

Published On :

 ಮೈಸೂರು: ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ನಡುವೆ ಬಹಳಷ್ಟು ವ್ಯತ್ಯಾಸಗಳಿರುವುದಿಲ್ಲ. ಕೆಲವು ವಿದ್ಯಾರ್ಥಿಗಳು ಉಪನ್ಯಾಸಕರಂತೆಯೇ ಕಾಣುತ್ತಾರೆ. ಕೆಲವು ಮಂದಿ ಉಪನ್ಯಾಸಕರು, ಪ್ರಾಧ್ಯಾಪಕರುಗಳೂ ವಿದ್ಯಾರ್ಥಿಗಳಂತೆ ಗೋಚರಿಸುತ್ತಾರೆ.
ಇದಕ್ಕೆ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗ ಧರಿಸುವ ಬಟ್ಟೆಗಳೂ ಕಾರಣ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕೆಂಬ ನಿಯಮವಿದ್ದರೂ ಸರ್ಕಾರಿ ಪದವಿ ಕಾಲೇಜಿನಲ್ಲಿ ಇದು ಕಡ್ಡಾಯವಾಗಿ ಜಾರಿಯಾಗಿಲ್ಲ.
ಹಲವು ಖಾಸಗಿ ಕಾಲೇಜುಗಳಲ್ಲಿ ಸಮವಸ್ತ್ರ ಪದ್ಧತಿಯನ್ನು ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಲಾಗಿದೆ. ಕೆಲವು ಕಾಲೇಜುಗಳಲ್ಲಿ ಬೋಧಕ ವರ್ಗಕ್ಕೂ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಆದರೆ, ಈ ವ್ಯವಸ್ಥೆ ರಾಜ್ಯದ ಬೆರಳೆಣಿಕೆಯಷ್ಟು ಕಾಲೇಜುಗಳನ್ನು ಹೊರತುಪಡಿಸಿ ಬೇರೆ ಯಾವ ಸರ್ಕಾರಿ ಕಾಲೇಜುಗಳಲ್ಲೂ ಏಕರೂಪದ ಸಮವಸ್ತ್ರ ಪದ್ಧತಿ ಇಲ್ಲ.
ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮೇಲೆ ಡಾ.ಎನ್.ಎಸ್. ಚನ್ನಪ್ಪಗೌಡ ಕೆಲವು ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿದಾಗ ಈ ಅಂಶಗಳನ್ನು ಗಮನಿಸಿದ್ದಾರೆ. ಪ್ರಾಂಶುಪಾಲರು ಹಾಗೂ ಬೋಧಕ ವರ್ಗಕಾಲೇಜಿಗೆ ಬರುವಾಗ ಸಮವಸ್ತ್ರದಲ್ಲಿ ಬಂದರೆ ಹೆಚ್ಚಿನ ಶಿಸ್ತು, ಸಮಾನತೆ ಅಳವಡಿಸಿಕೊಳ್ಳಬಹುದು ಎಂದು ಅವರು ಭಾವಿಸಿದ್ದಾರೆ.
ಘನತೆ ಹೆಚ್ಚಲು ಸಹಾಯಕ: ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕೆಂಬ ನಿಯಮವಿದೆ. ಆದರೆ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ವರ್ಗದವರಿಗೆ ಸಮವಸ್ತ್ರ ಹಾಕಿಕೊಳ್ಳಬೇಕೆಂಬ ಯಾವುದೇ ಷರತ್ತೂ ಇಲ್ಲ. ಹೀಗಿದ್ದರೂ ಏಕರೂಪ ಸಮವಸ್ತ್ರ ಪದ್ಧತಿ ಅಳವಡಿಸಿದಲ್ಲಿ ಕಾಲೇಜಿನ ಘನತೆ ಹೆಚ್ಚುತ್ತದೆ. ಅಲ್ಲದೇ, ಬೋಧಕರು ಮತ್ತು ವಿದ್ಯಾರ್ಥಿಗಳನ್ನು ಗುರುತಿಸಲು, ಶಿಸ್ತು ಕಾಪಾಡಲು ಮತ್ತು ಗಾಂಭೀರ್ಯತೆ ಹೆಚ್ಚುವ ಜೊತೆಗೆ ಒಳ್ಳೆಯ ವಾತಾವರಣ ಸೃಷ್ಟಿಯಾಗುತ್ತದೆ.
ಕಡ್ಡಾಯವಲ್ಲ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕೆಂಬ ನಿಯಮವಿದೆ. ಆದರೆ, ನಾವು ಈ ಪದ್ಧತಿಯನ್ನು ಕಡ್ಡಾಯಗೊಳಿಸಿಲ್ಲ.
ಸಮವಸ್ತ್ರ ಧರಿಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಲಾಗುವುದು ಎಂದು ಆಯುಕ್ತರು ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
-ಬಿ. ಶೇಖರ್ ಗೋಪಿನಾಥಂ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.