ಮಂಡ್ಯ

ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ

Published On :

ಲೆಕ್ಕ ಸಹಾಯಕರ ಹುದ್ದೆ ಪರೀಕ್ಷೆ
ಮಂಡ್ಯ: ಕರ್ನಾಟಕ ಲೋಕ ಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಜಿಲ್ಲೆಯಲ್ಲಿ 19 ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ 7344 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ನಗರದ ವಿವಿಧ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹಾಗೂ ಕೆಎಎಸ್ ಅಧಿಕಾರಿ ಶಿವಾನಂದ ಕರಾಳೆ ಭೇಟಿ ನೀಡಿ ಪರಿಶೀಲಿಸಿದರು.
ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಹಲಗೂರು: ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ನಡೆದಿದೆ. ಬೆಂಗಳೂರು ಎಲೆಕ್ಟ್ರಾನ್ ಸಿಟಿ ವಾಸಿ ಮೂಹಳ್ಳಿರಾಯ ಅಲೆಕ್ಸ್ (29) ಮೃತಪಟ್ಟ ದುರ್ದೈವಿ. ಬೆಂಗಳೂರಿನಿಂದ 60 ಮಂದಿ ಸ್ನೇಹಿತರೊಂದಿಗೆ ಶನಿವಾರ ಅಲೆಕ್ಸ್ ಪ್ರವಾಸಕ್ಕಾಗಿ ಮುತ್ತತ್ತಿಗೆ ಬಂದಿದ್ದರು. ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಸುಳಿಗೆ ಸಿಲುಕಿ ಅಲೆಕ್ಸ್ ಶನಿವಾರ ಮೃತಪಟ್ಟಿದ್ದರು. ಈಜುಗಾರರ ಸಹಾಯದಿಂದ ಶವ ಭಾನುವಾರ ಪತ್ತೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.