ಹುಣಸೂರು ಗಲಭೆ: 11 ಮಂದಿ ಬಂಧನ
ಹುಣಸೂರು: ಫೇಸ್‌ಬುಕ್‌ನಲ್ಲಿ ಧರ್ಮವೊಂದನ್ನು ಅವಹೇಳ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ, ಕರ್ತವ್ಯಕ್ಕೆ ಅಡ್ಡಿ ಹಾಗೂ ಪೇದೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿಯನ್ನು ಬಂಧಿಸಲಾಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ವಲಯ ಐಪಿಜಿ ಡಾ. ರಾಮಚಂದ್ರರಾವ್ ತಿಳಿಸಿದರು.
ಪಟ್ಟಣದ ಗಲಭೆ ಪೀಡಿತ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಳಿ ಸುದ್ದಿಗೆ ಜನತೆ ಕಿವಿಗೊಡದೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
11 ಮಂದಿ ಕಿಡಿಗೇಡಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ 2 ಪ್ರತ್ಯೇಕ ತಂಡ ರಚಿಸಲಾಗಿದೆ. ಗಾಯಾಳು ಪೊಲೀಸ್ ಪೇದೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಚಿತ್ರ ಕಳುಹಿಸಿದ್ದ ಆರೋಪದ ಮೇಲೆ ಸೆಂದೀಲ್ ಎಂಬಾತನ ಮೇಲೆ ಪ್ರಕರಣ ದಾಖಲಿಸಿದ್ದು, ಆತನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಮತ್ತು ಗಾಳಿ ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಪರಿಸ್ಥಿತಿ ಹತೋಟಿಗೆ ಬಂದಿದ್ದು ಸಹಜ ಸ್ಥಿತಿಯತ್ತ ಮರಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

