ಮಂಡ್ಯ

ಬಿಎಸ್‌ವೈ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳಲಿ

Published On :

ಟಿ. ನರಸೀಪುರ: ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಜನಪರ ಯೋಜನೆ ಜಾರಿಗೆ ತರಲು ಬಿ.ಎಸ್. ಯಡಿಯೂರಪ್ಪ ಅವರು ರಾಜಕಾರಣದ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳಬೇಕು ಎಂದು ಮೈಸೂರು ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ ಹೇಳಿದರು.
ಕೆಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 71ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ವರುಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹಾಗೂ ಯಡಿಯೂರಪ್ಪ ಅಭಿಮಾನಿಗಳು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೋಗಿಗಳಿಗೆ ಹಣ್ಣು ಹಂಪಲನ್ನು ಅವರು ವಿತರಿಸಿ ಮಾತನಾಡಿದರು.
ಯಡಿಯೂರಪ್ಪ ಅವರ ಮೂರೂವರೆ ವರ್ಷಗಳ ಆಡಳಿತವನ್ನು ಕಣ್ಣಾರೆ ಕಂಡಿರುವ ರಾಜ್ಯದ ಜನತೆ ಅವರಿಗೆ ರಾಜಕೀಯವಾಗಿ ನೈತಿಕ ಶಕ್ತಿಯನ್ನು ತುಂಬಬೇಕೆಂದು ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ವರುಣ ವಿಧಾನಸಭೆಯ ಕೆಜೆಪಿ ಅಧ್ಯಕ್ಷ ಕಲ್ಮಳ್ಳಿ ಶಿವಕುಮಾರ್, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರವಿಕುಮಾರ್, ಭೈರಾಪುರ ಗ್ರಾಪಂ ಅಧ್ಯಕ್ಷ ಪದ್ಮಾವೆಂಕಟೇಶ್, ಸದಸ್ಯ ಕೆಜೆಪಿ ಯುವ ಅಧ್ಯಕ್ಷ ಎಂ. ಮಿಥುನ್, ಗ್ರಾಪಂ ಮಾಜಿ ಅಧ್ಯಕ್ಷ ಎಸ್. ರಮೇಶ್‌ಚಾವ್ಲಾ, ಕಿರಗಸೂರು ಗ್ರಾಪಂ ಸದಸ್ಯ ರವಿ, ಕೆಜೆಪಿ ಪ್ರಧಾನ ಕಾರ್ಯದರ್ಶಿ ಎಂ. ವೆಂಕಟರಮಣಶೆಟ್ಟಿ, ಕಾರ್ಯದರ್ಶಿ ಗಣೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.