'ದೇಗುಲ ಟ್ರಸ್ಟಿಗಳಿಗೆ ನೀಡಿ'
ಶ್ರೀರಂಗಪಟ್ಟಣ: ಆರತಿ ಉಕ್ಕಡದ ಅಹಲ್ಯ ದೇವಿ ದೇವಸ್ಥಾನವನ್ನು ಟ್ರಸ್ಟಿಗಳ ವಶಕ್ಕೆ ನೀಡಬೇಕು ಎಂದು ಒತ್ತಾಯಿಸಿ ದೇವಾಲಯದ ಟ್ರಸ್ಟಿಗಳು, ಅರ್ಚಕರು ಮತ್ತು ಗ್ರಾಮಸ್ಥರು ತಹಸೀಲ್ದಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ಅರುಳ್ಕುಮಾರ್ ಅವರನ್ನು ಭೇಟಿ ಮಾಡಿದ ಅವರು, ಟ್ರಸ್ಟಿಗಳ ವಶದಲ್ಲೆ ದೇವಾಲಯ ಇರಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ. ಆದ್ದರಿಂದ ದೇವಾಲಯವನ್ನು ಮತ್ತೆ ಟ್ರಸ್ಟಿಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಆರತಿ ಉಕ್ಕಡ ದೇವಾಲಯದಲ್ಲಿ ಖಾಸಗಿ ವ್ಯಕ್ತಿಗಳು ದೇವರ ಹೆಸರಿನಲ್ಲಿ ಹಣ ವಸೂಲಿ ಮಾಡಿ ಸ್ವಾರ್ಥಕ್ಕೆ ಉಪಯೋಗಿಸಿಕೊಳ್ಳುತ್ತಿರುವ ಬಗ್ಗೆ ದೂರು ನೀಡಿದಾಗ ಸರ್ಕಾರದ ಮುಜರಾಯಿ ಇಲಾಖೆ ಕಾರ್ಯದರ್ಶಿಯವರ ಆದೇಶದ ಮೇರೆಗೆ ತಹಸೀಲ್ದಾರ್ ನೇತೃತ್ವದ ತಂಡ ಫೆ.22ರಂದು ಸರ್ಕಾರದ ವಶಕ್ಕೆ ತೆಗೆದುಕೊಂಡಿದ್ದರು.
ನಂತರ ದೇವಾಲಯದ ಸದಸ್ಯರು ಮುಜರಾಯಿ ಕಾರ್ಯದರ್ಶಿಯವರಿಗೆ ದೇವಾಲಯದ ವ್ಯಾಜ್ಯಗಳ ಕುರಿತು ಧಾರ್ಮಿಕ ಪರಿಷತ್ತಿನಲ್ಲಿ ದಾವೆ ಹಾಕಿದ್ದರು. ಅದು ಇತ್ಯರ್ಥವಾಗುವವರೆಗೆ ಮುಜರಾಯಿ ಇಲಾಖೆ ವಶಪಡಿಸಿಕೊಂಡಿರುವುದನ್ನು ಪ್ರಶ್ನಿಸಿದಾಗ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಟ್ರಸ್ಟಿಗಳ ವಶದಲ್ಲೇ ದೇವಾಲಯ ಇರಬೇಕು ಎಂದು ಆದೇಶ ನೀಡಿ ನೋಟಿಸ್ ಜಾರಿ ಮಾಡಲಾಗಿದೆ. ಕೂಡಲೇ ದೇವಾಲಯವನ್ನು ಟ್ರಸ್ಟಿಗಳ ವಶಕ್ಕೆ ನೀಡಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

