ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಪ್ರತಿಭಟನೆ
ಪಾಂಡವಪುರ: ಚರಂಡಿ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ರೈತರಿಂದ ವಶಪಡಿಸಿಕೊಂಡ ಭೂಮಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪಟ್ಟಣದಲ್ಲಿ ನಡೆಯುತ್ತಿರುವ ಕಾಮಗಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಹೊರ ವಲಯದಲ್ಲಿರುವ ಬನ್ನಾರಮ್ಮ ದೇವಸ್ಥಾನದ ಸಮೀಪದಲ್ಲಿ ರೈತರಿಂದ ತಾಲೂಕು ಅಡಳಿತ 6 ಎಕರೆ 20 ಗುಂಟೆ ಜಮೀನನ್ನು ಒಳಚರಂಡಿ ತ್ಯಾಜ್ಯ ಸಂಗ್ರಹಣಾ ಘಟಕ ಅರಂಭಿಸಲು ಭೂಸ್ವಾದೀನ ಪಡಿಸಿಕೊಂಡಿತ್ತು. ಈ ನಿಟ್ಟಿನಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಸದರಿ ಜಮೀನಿನಲ್ಲಿ ಜೆ.ಸಿ.ಬಿ.ಯಂತ್ರಗಳು ಮರಗಳನ್ನು ಉರುಳಿಸಿ ಹೊರೆಗೆ ಸಾಗಿಸುವ ಪ್ರಕ್ರಿಯೆಗೆ ತಾಲೂಕು ಅಡಳಿತ ಬಿಗಿ ಪೊಲೀಸ್ ಬಂದೋಬಸ್ತ್ನೊಡನೆ ಕಾಮಗಾರಿಗೆ ಚಾಲನೆ ನೀಡಿತು.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಗಮಿಸಿದ ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ಮತ್ತು ರೈತ ಸಂಘದ ಕಾರ್ಯಕರ್ತರು ಜೆಸಿಬಿ ಯಂತ್ರದ ಮುಂದೆ ಕುಳಿತು ಪ್ರತಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಅರ್.ಲತಾ ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿಕೊಂಡರು. ಹಾಗೂ ಕಾಮಗಾರಿ ನಡೆಸಲು ಅನುವು ಮಾಡಿಕೊಡುವಂತೆ ಮನವೊಲಿಸಲು ಪ್ರಯತ್ನಿಸಿದರು. ರೈತರಿಗೆ ಪರಿಹಾರ ಹಣ ನೀಡಲಾಗುವುದು. ಆದರೆ ಹೆಚ್ಚಿನ ಹಣವನ್ನು ನ್ಯಾಯಾಲಯದ ಮೂಲಕ ಪಡೆದುಕೊಳ್ಳಬಹುದು ಎಂದರು.
ಪಟ್ಟು ಬಿಡದ ರೈತ ನಾಯಕ ಪುಟ್ಟಣ್ಣಯ್ಯ, ಪಟ್ಟಣದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರಲ್ಲದೆ, ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಸಿಗದಿದ್ದರೆ ಅವರ ಬದುಕು ಸಂಕಷ್ಟಕ್ಕೆ ಸಿಲುಕುತ್ತಾರೆ. ಕುಟುಂಬದ ಮುಂದಿನ ಭವಿಷ್ಯದ ದೃಷ್ಟಿಯಿಂದ ರೈತರ ಜಮೀನಿಗೆ ವೈಜ್ಞಾನಿಕ ದರ ನೀಡಿ, ಕಾಮಗಾರಿ ಮುಂದುವರಿಸುವಂತೆ ಅಗ್ರಹಿಸಿದರು.
13ರಂದು ಕಾಮಗಾರಿ ಪ್ರಾರಂಭಿಸಿ: ಪಪಂ ಚುನಾವಣೆ ಇರುವುದರಿಂದ ಈಗ ಕಾಮಗಾರಿ ಪ್ರಾರಂಭಿಸಿರುವುದು ಸೂಕ್ತವಲ್ಲ. ಮಾ.13 ರಂದು ಒಳಚರಂಡಿ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಾಮಗಾರಿ ಪ್ರಾರಂಭಿಸಿ ನಾನು ಬಂದು ನಿಂತು ಸಹಕಾರ ಕೊಡುತ್ತೇನೆ ಎಂದು ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಅವರಿಗೆ ದೂರವಾಣಿ ಮೂಲಕ ತಿಳಿಸಿದರಲ್ಲಿದೆ ಹಾಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಯವರನ್ನು ಈ ಸಂದರ್ಭದಲ್ಲಿ ಒತ್ತಾಯಸಿದರು.
ತಾತ್ಕಾಲಿಕ ತಡೆ: ಈ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಮನವಿ ಮೇರೆಗೆ ಜಿಲ್ಲಾಧಿಕಾರಿ ಕಾಮಗಾರಿಗೆ ತಾತ್ಕಾಲಿಕ ತಡೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

