ನೀರು ಮಿತವಾಗಿ ಬಳಸಿ
ಮಂಡ್ಯ: ಕೃಷಿ ಪದ್ಧತಿಯಲ್ಲಿ ಅತ್ಯಲ್ಪ ನೀರು ಬಳಸಿಕೊಂಡು ಉತ್ತಮ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದು ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.
ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದ್ದ ಫಲ- ಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ನೀರು ಮನುಷ್ಯನ ಅತ್ಯಮೂಲ್ಯ ಆಸ್ತಿಯಾಗಿದೆ. ಇದನ್ನು ಮಿತವ್ಯಯವಾಗಿ ಬಳಸಬೇಕು. ಜಿಲ್ಲೆಯಲ್ಲಿ ಇಂದು ನೀರಿಗಾಗಿ 700- 800 ಅಡಿ ಬೋರ್ವೆಲ್ ಕೊರೆಯುವ ಪರಿಸ್ಥಿತಿ ಎದುರಾಗಿದೆ ಎಂದರು.
ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಶ್ರಮವನ್ನು ನಾವು ಇಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ಕಾಣಬಹುದಾಗಿದೆ. ಈ ಪ್ರದರ್ಶನದಲ್ಲಿ ವಿವಿಧ ರೀತಿಯ ಪುಷ್ಪಗಳು, ತರಕಾರಿಗಳು ಹಾಗೂ ವಿವಿಧ ಬಗೆಯ ತಳಿಗಳನ್ನು ಅನಾವರಣಗೊಳಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಮಾತನಾಡಿ, ಫಲಪುಷ್ಪ ಪ್ರದರ್ಶನದ ಜೊತೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯವರು ರೈತರಿಗೆ ಮಾಹಿತಿ ನೀಡಲು ಮಳಿಗೆಗಳನ್ನು ತೆರೆದಿರುತ್ತಾರೆ. ಜಿಲ್ಲೆಯ ಎಲ್ಲಾ ತಾಲೂಕಿನ ರೈತರು ಈ ಪ್ರದರ್ಶನದಲ್ಲಿ ಭಾಗವಹಿಸಿ ಕೃಷಿಗೆ ಉಪಯುಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ನಾಗರತ್ನ, ಸಿಇಒ ಪಿ.ಸಿ. ಜಯಣ್ಣ, ಉಪ ಕಾರ್ಯದರ್ಶಿ ಮಹೇಶ್, ಬಿ.ಆರ್. ಪೂರ್ಣಿಮಾ, ನಗರಸಭೆ ಅಧ್ಯಕ್ಷ ಅರುಣ್ಕುಮಾರ್, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

