ವಿವಿಧ ಗ್ರಾಮಗಳಿಗೆ ಡಿ.ಸಿ. ತಮ್ಮಣ್ಣ ಭೇಟಿ
ಭಾರತೀನಗರ: ಶಕ್ತಿ ಇರುವವರೆಗೂ ರಾಜಕೀಯ ಕ್ಷೇತ್ರವನ್ನು ಜನಸೇವೆಗೆ ಮುಡುಪಾಗಿಟ್ಟಿರುವುದಾಗಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.
ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳಲು ಸಮೀಪದ ಗೋಪನಹಳ್ಳಿ, ಸಬ್ಬನಹಳ್ಳಿ, ಯಡಗನಹಳ್ಳಿ, ಕೊತ್ತನಹಳ್ಳಿ ಸೇರಿದಂತೆ ಇತರೆ ಗ್ರಾಮಗಳ ಕಾರ್ಯಕರ್ತರನ್ನು ಭೇಟಿ ಮಾಡಿ ಚುನಾವಣಾ ಅಭಿಪ್ರಾಯ ಸಂಗ್ರಹಿಸಿದರು.
ನಂತರ ಮಾತನಾಡಿ, 2 ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಹಲವಾರು ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಪ್ರೀತಿಗೆ ಪಾತ್ರರಾಗಿದ್ದೇನೆ. ಅಧಿಕಾರ ಮುಗಿದ ನಂತರವೂ ಮತದಾರರ ಋಣ ತೀರಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಜಿ.ಟಿ. ರವೀಂದ್ರಕುಮಾರ್, ಎ.ಪಿ. ರಾಜಣ್ಣ, ಜಿಪಂ ಮಾಜಿ ಸದಸ್ಯ ಕುಮಾರರಾಜು, ಡಿ.ಸಿ. ಮಹೇಂದ್ರ, ಎಪಿಎಂಸಿ ಸದಸ್ಯ ವಿಜಿಕುಮಾರ್, ಕರಡಕೆರೆ ಬೊಮ್ಮಣ್ಣ, ಕೆಂಪಣ್ಣ, ಚಿಕ್ಕವೆಂಕಟೇಶ್, ಪುಟ್ಟೇಗೌಡ, ನಂಜುಂಡೇಗೌಡ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

