ಸುಭದ್ರ ಪ್ರಜಾಪ್ರಭುತ್ವಕ್ಕೆ ಜನರ ಸಹಭಾಗಿತ್ವ ಅಗತ್ಯ
ಮದ್ದೂರು: ರೈತರ ಹಿತ ಮತ್ತು ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪನೆಯಲ್ಲಿ ಸರ್ವರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ಹೆಬ್ಸಿಬಾರಾಣಿ ಶುಕ್ರವಾರ ಹೇಳಿದರು.
ಪಟ್ಟಣದ ಎಚ್.ಕೆ. ವೀರಣ್ಣಗೌಡ ಕಾಲೇಜಿನಲ್ಲಿ ಭಾರತ ಚುನಾವಣಾ ಆಯೋಗ, ತಹಸೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ನ್ಯಾಯಸಮ್ಮತ, ಶಾಂತಿಯುತ ಚುನಾವಣೆ ನಡೆಯುವಲ್ಲಿ ಆಯೋಗ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಸಂವಿಧಾನದ ಆಸೆ ಈಡೇರಿಸುವಲ್ಲಿ ಯುವಕರ ಪಾತ್ರ ಇಂದಿನ ದಿನಗಳಲ್ಲಿ ಹೆಚ್ಚಿನದಾಗಿದೆ. ಜಾತಿ, ಮತ, ಧರ್ಮ, ಭಾಷೆ, ಪ್ರಾಂತ್ಯ, ಲಿಂಗ, ಬಡವ, ಶ್ರೀಮಂತ ಎಂಬ ಭೇದವಿಲ್ಲದೇ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಯುವಕರು ವ್ಯರ್ಥಗೊಳಿಸಬಾರದು ಎಂದು ಸಲಹೆ ನೀಡಿದರು.
18 ವರ್ಷ ಮೀರಿದ ಎಲ್ಲಾ ಯುವಕರು ತಪ್ಪದೆ ಮತದಾನ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಆ ಮೂಲಕ ಚುನಾವಣೆಯಲ್ಲಿ ಅವಕಾಶ ವಂಚಿತರಾಗದೆ ತಮ್ಮ ಹಕ್ಕು ಚಲಾಯಿಸುವುದರೊಂದಿಗೆ ಸುಭದ್ರ ಸರ್ಕಾರ ಸ್ಥಾಪನೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ತರಬೇತಿ ಉಪವಿಭಾಗಾಧಿಕಾರಿ ಶಿವಾನಂದ ಮಾತನಾಡಿ, ಮತದಾನದ ಗುರುತಿನ ಚೀಟಿ ಪ್ರತಿಯೊಬ್ಬರ ಜೀವನದ ಹಲವು ಸಂದರ್ಭಗಳಲ್ಲಿ ಅವಶ್ಯಕವಾಗಿರುತ್ತದೆ. ವಿಳಾಸದ ಗುರುತಿನ ಜೊತೆಗೆ ತಾಂತ್ರಿಕ ಮತದಾನ ವ್ಯವಸ್ಥೆಗೆ ಗುರುತಿನ ಚೀಚಿ ಸಹಾಯಕವಾಗುತ್ತದೆ ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಎಂ.ಕೆ.ಸವಿತಾ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ನಡೆದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಯುವ ಮತದಾರರ ಪಾತ್ರ ಕುರಿತು ಪ್ರಬಂಧ ಮಂಡಿಸಿದರು.
ಕಾರ್ಯಕ್ರಮದಲ್ಲಿ ನೂತನವಾಗಿ ನೋಂದಾಯಿತರಾದ ಯುವ ಮತದಾರರಿಗೆ ಗುರುತಿನ ಚೀಟಿ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ದ್ವಿತೀಯ ದರ್ಜೆ ತಹಸೀಲ್ದಾರ್ ಎನ್. ರಾಮಪ್ಪ, ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಕೆ.ಟಿ.ಚಂದು, ಪ್ರಾಂಶುಪಾಲ ಪ್ರೊ. ಸಿದ್ದರಾಜು, ಪ್ರಕಾಶ್, ಪ್ರಾಧ್ಯಾಪಕ ಎಚ್.ಪಿ. ಶಿವಲಿಂಗಪ್ಪ, ನಿರ್ದೇಶಕ ಅಪೂರ್ವ ಚಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

