ಮಂಡ್ಯ

ಫೆ. 7ಕ್ಕೆ ಬಸರಾಳು ಗ್ರಾಮಕ್ಕೆ ಎಚ್‌ಡಿಕೆ

Published On :

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಫೆ.7 ರಂದು ಬಸರಾಳು ಗ್ರಾಮಕ್ಕೆ ಆಗಮಿಸಲಿದ್ದಾರೆ ಎಂದು ಶಾಸಕ ಎಂ. ಶ್ರೀನಿವಾಸ್ ತಿಳಿಸಿದರು. ನಗರದ ಔಷಧ ವ್ಯಾಪಾರಿಗಳ ಭವನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕುಮಾರಸ್ವಾಮಿ ಅವರನ್ನು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಲು ದ್ವಿಚಕ್ರ ವಾಹನದ ಮೂಲಕ ಅಸಿಟೇಟ್ ಟೌನ್, ಉಮ್ಮಡಹಳ್ಳಿ, ಬಸವನಪುರ, ಕೀಲಾರ, ಮಾರಗೌಡನಹಳ್ಳಿ ಮಾರ್ಗವಾಗಿ ಬಸರಾಳಿಗೆ ಕರೆದೊಯ್ಯಲು ಮೆರವಣಿಗೆ ಹಮ್ಮಿಕೊಂಡಿದ್ದಾರೆ ಎಂದರು. ಈಗಾಗಲೇ ತಾವು ಎರಡು ಬಾರಿ ಶಾಸಕ ಆಯ್ಕೆಯಾಗಿದ್ದೇನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಕೆಲಸ ಮಾಡಿದ್ದೇನೆ. 3ನೇ ಬಾರಿಯೂ ತಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಗಾದಿಗೆ ಕುರಿಸಲು ತಮ್ಮ ಆಯ್ಕೆಗೆ ಸಹಕರಿಸುವಂತೆ ಮನವಿ ಮಾಡಿದರು.  ಬಿಜೆಪಿ ಸರ್ಕಾರ ಫೆ. 8ರಂದು ಬಜೆಟ್ ಮಂಡಿಸುವುದೇ ಎಂಬ ಅನುಮಾನ ಕಾಡುತ್ತಿದೆ. ಈಗಾಗಲೇ ಚುನಾವಣಾ ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯವ ಸಾಧ್ಯತೆಗಳಿವೆ. ಎಲ್ಲ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಬೇಕೆಂದು ಸಲಹೆ ನೀಡಿದರು.  ಜ.28 ಮತ್ತು 29ರಂದು ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಭಕ್ತರ ಸಂಗಮ ಹಾಗೂ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಲಕ್ಷಾಂತರ ಭಕ್ತಾದಿಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಊಟದ ವ್ಯವಸ್ಥೆ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ಆಟೋ ನಾಗರಾಜು, ವಿಜಯಾನಂದ, ಶ್ರೀಕಾಂತ್, ಮೊಯಿದ್ದೀನ್, ಅಜ್ಮಲ್, ಕಂಬದಹಳ್ಳಿ ಪುಟ್ಟಸ್ವಾಮಿ, ನಾಗಮ್ಮ, ಪದ್ಮಾವತಿ, ಭದ್ರಾಚಲಮೂರ್ತಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.