ಆಧಾರ್ ನೋಂದಣಿಯಲ್ಲಿ ವಸೂಲಿ: ಗ್ರಾಮಸ್ಥರ ಆರೋಪ
ಮಳವಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಧಾರ್ ಕಾರ್ಡ್ ನೋಂದಣಿಗೆ 50 ರಿಂದ 100 ವಸೂಲಿ ಮಾಡುತ್ತಿದ್ದಾರೆಂದು ಕ್ಯಾತನಹಳ್ಳಿ ಗ್ರಾಮಸ್ಥರು ದೂರಿದ್ದಾರೆ. ಈ ಕುರಿತು ಹೆಸರನ್ನು ಹೇಳಲು ಇಚ್ಛಿಸದ ಗ್ರಾಮದ ಮುಖಂಡರು, ಗ್ರಾಮದ ವಾಸಿಗಳಾದ ಕೆಲವು ಕಂಪ್ಯೂಟರ್ ಆಪರೇಟರ್ಗಳು, ಪಕ್ಕದ ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ಆಧಾರ್ ನೋಂದಣಿ ಮಾಡುತ್ತಿದ್ದು, ಯಂತ್ರಗಳನ್ನು ಅಲ್ಲಿಂದ ತಂದು ಮಳವಳ್ಳಿ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿದ್ದಾರೆ. 50 ರಿಂದ 100 ವಸೂಲಿ ಮಾಡುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

