ಮಂಡ್ಯ

ಎನ್‌ಎಸ್‌ಎಸ್‌ನಿಂದ ಉತ್ತಮ ನಾಯಕತ್ವ

Published On :

ಪಾಂಡವಪುರ: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಯುವ ಜನತೆ ತೊಡಗಿಸಿಕೊಂಡರೆ ಮಾನವೀಯ ಮೌಲ್ಯಗಳು ಹಾಗೂ ಉತ್ತಮ ನಾಯಕತ್ವ ಬೆಳೆಸಿಕೊಂಡು ದೇಶದಲ್ಲಿ ಉತ್ತಮ ಸೇವೆ ಮಾಡಲು ಸಾಧ್ಯ ಎಂದು ಶಾಸಕ ಸಿ.ಎಸ್. ಪುಟ್ಟರಾಜು ಹೇಳಿದರು.
ತಾಲೂಕಿನ ಕುಂತಿ ಬೆಟ್ಟದ ಶಂಕರಾನಂದ ಭಾರತಿ ವಿದ್ಯಾಪೀಠದ ಆವರಣದಲ್ಲಿ ಮೈಸೂರು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಅಂತರ್ ಕಾಲೇಜು ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮನುಷ್ಯ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ವ್ಯಕ್ತಿತ್ವ ರೂಪಿಸಲು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡಾಗ ಶ್ರಮದಾನ ಮೂಲಕ ತಮ್ಮ ಜೀವನ ರೂಪಿಸಿಕೊಂಡು ಸಮಾಜ ಬದಲಾವಣೆ ಮಾಡಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಡಾ. ಎಸ್. ಜೆ. ರಾಮದಾಸ್‌ರೆಡ್ಡಿ ಅವರು ಬರೆದಿರುವ ನದಿಯ ತೀರದ ಸಾಂಸ್ಕೃತಿಕ ಒಂದು ಅಧ್ಯಯನ ಲೋಕಪಾವನಿ ಪುಸ್ತಕವನ್ನು ಶಾಸಕರ ಸಿ.ಎಸ್. ಪುಟ್ಟರಾಜು ಅವರು ಬಿಡುಗಡೆ ಮಾಡಿದರು. ಡಾ.ಎಂ. ರುದ್ರಯ್ಯ, ಮುಖ್ಯ ಅತಿಥಿಗಳಾಗಿ ಕುಂತಿಬೆಟ್ಟದ ಶಂಕರಾನಂದ ವಿದ್ಯಾ ಸಂಸ್ಥೆ ಅಧ್ಯಕ್ಷ ಎಚ್. ವಿ. ಶ್ರೀಕಂಠಯ್ಯ, ಕಾರ್ಯದರ್ಶಿ ನಿಂಗೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಕೆ.ಪುಟ್ಟೇಗೌಡ, ಮಾಜಿ ಅಧ್ಯಕ್ಷ ವಿಜೇಂದ್ರ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್. ಜಯರಾಮು, ಧನ್ಯಕುಮಾರ್, ನಿವೃತ್ತ ಶಿಕ್ಷಕ ಚಂದ್ರಶೇಖರಯ್ಯ ಇದ್ದರು. ಶಿಬಿರಾರ್ಥಿಗಳಾದ ಹೇಮಾವತಿ ಮತ್ತು ಮಹೇಶ್ ಶಿಬಿರ ಕುರಿತು ಅನಿಸಿಕೆ ಹಂಚಿಕೊಂಡರು. ಸಂಯೋಜನಾಧಿಕಾರಿ ಡಾ. ಎಚ್. ಅರ್. ತಿಮ್ಮೇಗೌಡರು ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.