ರಂಗನಾಥಸ್ವಾಮಿ ಗೋಪುರದಿಂದ ಕಳಚಿ ಬಿದ್ದ ಕಳಶ
ಶ್ರೀರಂಗಪಟ್ಟಣ: 1200ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಶ್ರೀರಂಗನಾಥಸ್ವಾಮಿ ದೇವಾಲಯದ ಗೋಪುರದಲ್ಲಿನ ಪಂಚಲೋಹದ ಕಳಶ ಕಳಚಿ ಬಿದ್ದಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ದೇವಸ್ಥಾನದ ಎಡ ಭಾಗದ ಗೋಪುರದಲ್ಲಿದ್ದ ಪಂಚಲೋಹದ ಕಳಶ ಮರದ ತುಂಡಿನೊಂದಿಗೆ ಮಧ್ಯಾಹ್ನ 12ಗಂಟೆ ಸಮಯದಲ್ಲಿ ಕಳಚಿ ಬಿದ್ದಿದೆ. ದೇಗುಲದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇದ್ದಿದ್ದರಿಂದ ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ದೇವಸ್ಥಾನದ ಒಳ ಭಾಗದಲ್ಲಿ ನೆಲಕ್ಕಪ್ಪಳಿಸಿರುವ 30 ಕೆಜಿಗೂ ಹೆಚ್ಚು ತೂಕವಿರುವ ಕಳಶ, ಭಕ್ತರು ಯಾರೂ ಇಲ್ಲದಿದ್ದ ಕಾರಣ ಅಪಾಯದಿಂದ ಪಾರಾದಂತಾಗಿದೆ. ಅಲ್ಲದೆ ಈ ಕಳಶದ ಪಕ್ಕದಲ್ಲಿದ್ದ ಮತ್ತೊಂದು ಕಳಶವೂ ಬೀಳುವ ಹಂತ ತಲುಪಿದ್ದರಿಂದ ದೇವಸ್ಥಾನದ ಆಡಳಿತ ಮಂಡಳಿ ಸುರಕ್ಷಿತವಾಗಿ ಕಳಚಿ ಕೆಳಗಿಳಿಸಿದ್ದಾರೆ.
ಗೋಪುರದಲ್ಲಿ ಬಿರುಕು: ದೇವಸ್ಥಾನದ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡು ಹಲವಾರು ವರ್ಷಗಳಾಗಿದೆ. ಹೀಗಿದ್ದರೂ ಕೇಂದ್ರ ಪುರಾತತ್ವ ಇಲಾಖೆ ಮತ್ತು ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನದ ಅಭಿವೃದ್ಧಿಯನ್ನು ಕಡೆಗಣಿಸಿದೆ.
ಭಕ್ತರಿಂದ ಕೋಟ್ಯಂತರ ರು. ಆದಾಯ ಪಡೆಯುತ್ತಿರುವ ಸರ್ಕಾರ ಭಕ್ತರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ.
ಕೇಂದ್ರ ಪುರಾತತ್ವ ಇಲಾಖೆ ಹಾಗೂ ಮುಜರಾಯಿ ಇಲಾಖೆಗಳ ಪರಸ್ಪರ ತಿಕ್ಕಾಟದಿಂದ ದೇವಸ್ಥಾನದ ಅಭಿವೃದ್ಧಿ ಕಾಣುತ್ತಿಲ್ಲ ಎಂಬುದು ಭಕ್ತರ ಆರೋಪ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

