ಮಂಡ್ಯ

ಪ್ರೊ. ಕೇಶವಮೂರ್ತಿ ಅಧ್ಯಕ್ಷರಾಗಿ ಆಯ್ಕೆ

Published On :

ಮಂಡ್ಯ:  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೃಷ್ಣರಾಜಪೇಟೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಪ್ರಗತಿಪರ ಚಿಂತಕರಾದ ಸಾಹಿತಿ ಪ್ರೊ. ಎಚ್.ಎಲ್. ಕೇಶವಮೂರ್ತಿ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಹಾಗೂ ಘಟಕದ ಪದಾಧಿಕಾರಿಗಳು ಭಾನುವಾರ ಪ್ರೊ. ಎಚ್.ಎಲ್. ಕೇಶವಮೂರ್ತಿ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡುವ ಮೂಲಕ ಸಮ್ಮೇಳನಕ್ಕೆ ಗೌರವ ಪೂರ್ವಕವಾಗಿ ಆಹ್ವಾನ ನೀಡಿದರು.
ಜಿಲ್ಲೆಯಲ್ಲಿ ವೈಚಾರಿಕ ಚಿಂತನೆ, ಸಾಮಾಜಿಕ ಕಳಕಳಿ, ಸಂಘಟನೆ ಮತ್ತು ಸಾಹಿತ್ಯ ಕೃಷಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಎಚ್.ಎಲ್.ಕೇಶವಮೂರ್ತಿ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಜಿಲ್ಲಾ ಸಾಹಿತ್ಯ ವಲಯದಲ್ಲು ಒತ್ತಾಯದ ಕೂಗು ಕೇಳಿ ಬಂದಿತ್ತು. ಕೆ.ಆರ್.ಪೇಟೆಯಲ್ಲಿ ಮಾ.30 ಮತ್ತು 31ರಂದು ಸಮ್ಮೇಳನ ನಡೆಯಲಿದೆ. ಕಸಾಪ ಜಿಲ್ಲಾ ಘಟಕದ ನಿರ್ಧಾರಕ್ಕೆ ಪೂರಕವಾಗಿ ಸ್ಪಂದಿಸಿದ ಎಚ್.ಎಲ್. ಕೇಶವಮೂರ್ತಿ ಅವರು ಸಮ್ಮೇಳನದ ಅಧ್ಯಕ್ಷ ಗಾದಿಯನ್ನು ಅಲಂಕರಿಸಲು ಒಪ್ಪಿಗೆ ಸೂಚಿಸಿದರು ಎಂದು ಸಮಿತಿ ಸದಸ್ಯರೊಬ್ಬರು 'ಕನ್ನಡಪ್ರಭ'ಕ್ಕೆ ತಿಳಿಸಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ.ಲೋಕೇಶ್, ಚಿಕ್ಕಹಾರೋಹಳ್ಳಿ ಪುಟ್ಟಸ್ವಾಮಿ, ಕೋಶಾಧ್ಯಕ್ಷ ಡಾ. ಕೃಷ್ಣೇಗೌಡ ಹುಸ್ಕೂರು, ಕಸಾಪ ಕೆ.ಆರ್.ಪೇಟೆ ತಾಲೂಕು ಘಟಕ ಅಧ್ಯಕ್ಷ ಅ.ಮಾ. ಶ್ಯಾಮೇಶ್, ಮಂಡ್ಯ ತಾಲೂಕು ಘಟಕ ಅಧ್ಯಕ್ಷ ಸಿ.ಕೆ. ರವಿಕುಮಾರ್, ಧನ್ಯಕುಮಾರ್, ದೇ.ರಾ. ಜಗದೀಶ್, ಪುರುಷೋತ್ತಮ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.