ಮಂಡ್ಯ

ಮತದಾನಕ್ಕೆ 48 ಗಂಟೆ ಮುನ್ನ ಪ್ರಚಾರ ಅಂತ್ಯಗೊಳಿಸಿ: ಡಿಸಿ

Published On :

ಮಂಡ್ಯ:  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾನಕ್ಕೆ ನಿಗದಿಪಡಿಸಿರುವ 48 ಗಂಟೆಗಳ ಮುಂಚಿತವಾಗಿ ಎಲ್ಲಾ ಬಗೆಯ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗ ಸೂಚಿಸಿರುವಂತೆ ಮತದಾನಕ್ಕೆ ಮುಂಚಿನ 48 ಗಂಟೆಯೊಳಗಾಗಿ ಚುನಾವಣೆಯ ಬಹಿರಂಗ ಪ್ರಚಾರ, ಸಭೆ, ಸಮಾರಂಭ, ಮೆರವಣಿಗೆ, ಟಿ.ವಿ., ಮುದ್ರಣ ಮಾಧ್ಯಮ, ಶ್ರವಣ, ಎಲೆಕ್ಟ್ರಾನಿಕ್ ಇತ್ಯಾದಿ ಮಾಧ್ಯಮಗಳ ಮೂಲಕ ಯಾವುದೇ ಪ್ರಚಾರ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ರಾಜಕೀಯ ಪಕ್ಷಗಳ ಮುಖಂಡರು, ತಾರಾ ಪ್ರಚಾರಕರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ, ಅಭ್ಯರ್ಥಿಗಳ ಪರ ಮತ ಯಾಚಿಸುವ ಆ ವಾರ್ಡಿನ ಮತದಾರರಲ್ಲದ ಏಜೆಂಟರು, ಮತ್ತು ಆ ವಾರ್ಡ್‌ನ ಮತದಾರರಲ್ಲದವರು ಮಾ.5ರ ಬೆಳಿಗ್ಗೆ 7 ಗಂಟೆ ಒಳಗಾಗಿ ವಾರ್ಡ್ ವ್ಯಾಪ್ತಿ ಬಿಡಬೇಕು. ಸರ್ವರೂ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ, ಚುನಾವಣೆಗಳನ್ನು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.