ಮಂಡ್ಯ

ಹುಲಿಗೆರೆಪುರ ಬಳಿ ಎಚ್ಡಿಕೆಗೆ ಕಪ್ಪುಬಾವುಟ ಪ್ರದರ್ಶನ: ಘೇರಾವ್

Published On :

ಮದ್ದೂರು:  ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರ ಜೆಡಿಎಸ್ ಸೇರ್ಪಡೆ ವಿರೋಧಿಸಿ ಶಾಸಕಿ ಕಲ್ಪನಾ ಸಿದ್ದರಾಜು ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಮಾಡಿದ ಘಟನೆ ತಾಲೂಕಿನ ಹುಲಿಗೆರೆಪುರ ಗೇಟ್ ಬಳಿ ಭಾನುವಾರ ಜರುಗಿತು.
ತಾಲೂಕಿನ ಭಾರತೀನಗರದಲ್ಲಿ ಡಿ.ಸಿ. ತಮ್ಮಣ್ಣ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎಚ್.ಡಿ. ಕುಮಾರಸ್ವಾಮಿ ಅವರಿದ್ದ ಕಾರು ಅಡ್ಡಗಟ್ಟಿದ ಬೆಂಬಲಿಗರು, ಕುಮಾರಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಮನಗರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 3.45ರ ಸುಮಾರಿಗೆ ಹುಲಿಗೆರೆಪುರ ಗೇಟ್ ಬಳಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಕುಮಾರಸ್ವಾಮಿ ಕಾರಿನಲ್ಲಿ ಭಾರತೀನಗರಕ್ಕೆ ತೆರಳುತ್ತಿದ್ದರು.
ಈ ಸಂದರ್ಭ ಸ್ವಾಭಿಮಾನಿ ಎಂ.ಎಸ್.ಸಿದ್ದರಾಜು ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಮೋಹಿತ್‌ಗೌಡ ಹಾಗೂ ಕಲ್ಪನಾ ಸಿದ್ದರಾಜು ಅವರ ನೂರಾರು ಬೆಂಬಲಿಗರು ಕುಮಾರಸ್ವಾಮಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಲ್ಲದೆ ಘೇರಾವ್ ಮಾಡಿದರು.
ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಸ್. ಲಕ್ಷ್ಮಣ್, ಕಳೆದ 24 ವರ್ಷಗಳಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ತಮ್ಮ ಮನೆಯಂತೆ ಮಾಜಿ ಶಾಸಕ ದಿ. ಎಂ.ಎಸ್.ಸಿದ್ದರಾಜು, ಶಾಸಕಿ ಕಲ್ಪನಾ ಸಿದ್ದರಾಜು, ಬೆಂಬಲಿಗರು ಕಟ್ಟಿ ಬೆಳೆಸಿದ್ದಾರೆ. ಇಂತಹ ಮನೆಗೆ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಕಾಗೆಯಂತೆ ಪ್ರವೇಶ ಮಾಡಿ ಅಪಶಕುನ ಉಂಟು ಮಾಡಿದ್ದಾರೆ ಎಂದು ಟೀಕಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಡಿ.ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು ಶಾಮೀಲಾಗಿ ಚುನಾವಣೆ 'ಬಿ' ಫಾರಂ ಹಣಕ್ಕಾಗಿ ಮಾರಾಟ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಡಿ.ಸಿ. ತಮ್ಮಣ್ಣ ಅವರಂತಹ ಹಣದ ರಾಜಕಾರಣ ಮಾಡುವವರಿಗೆ ಮಣೆ ಹಾಕುವ ಮೂಲಕ ಕಲ್ಪನಾ ಸಿದ್ದರಾಜು ಅವರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸೊಳ್ಳೇಪುರ ಸತೀಶ, ಕದಲೂರು ಮಹದೇವು, ಚಿಕ್ಕರವಿ, ಮುತ್ತೇಗೌಡ, ಸಂಪತ್ತು, ಪುಟ್ಟಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.