ಕಗ್ಗ ಆತ್ಮದರ್ಶನದ ಮಹತ್ವದ ಕೃತಿ
ಕ.ಪ್ರ.ವಾರ್ತೆ ್ಣ ನಾಗಮಂಗಲ ್ಣ ಮಾ. 19
ಕಗ್ಗವು ಜೀವನದರ್ಶನದಿಂದ ಕೂಡಿದೆ. ವ್ಯಕ್ತಿಯ ಆತ್ಮದರ್ಶನಕ್ಕೆ ಮಹತ್ವ ನೀಡಿದ ಕೃತಿಯಾಗಿದೆ ಎಂದು ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಬಿ. ಶಂಕರೇಗೌಡ ಅಭಿಪ್ರಾಯಪಟ್ಟರು.
ಪಟ್ಟಣದ ಕನ್ನಡ ಸಂಘವು ಡಿ.ವಿ. ಗುಂಡಪ್ಪ ಅವರ ಜನ್ಮದಿನದ ಅಂಗವಾಗಿ ಕಗ್ಗದಲ್ಲಿ ಶಿಕ್ಷಣದ ಒಲವುಗಳು ಎಂಬ ವಿಷಯದ ಕುರಿತು ಸುಗ್ರೀವಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗೀತೆಯನ್ನು ಬಹಳವಾಗಿ ಧ್ವನಿಸುವ ಕಗ್ಗವು ವಿದ್ಯಾರ್ಥಿಗೆ ಆತ್ಮೋನ್ನತಿ ದರ್ಶಿಸುವ ರಹದಾರಿಯಾಗಿದೆ. ಮಾನವನ ಉನ್ನತಿಗೆ ಏನೆಲ್ಲಾ ಬೇಕೋ ಎಲ್ಲವನ್ನೂ ಕಗ್ಗದಲ್ಲಿ ಡಿವಿಜಿ ಬಹಳ ಅರ್ಥಗರ್ಭಿತವಾಗಿ ಕಟ್ಟಿಕೊಟ್ಟಿದ್ದಾರೆ. ಹಾಗಾಗೆಯೇ ಅದನ್ನು ಕನ್ನಡದ ಭಗವದ್ಗೀತೆ ಎಂದು ಕರೆದಿರುವುದು ಅತ್ಯಂತ ಸೂಕ್ತವೆನಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪುತಿನ ಜನ್ಮದಿನದ ಅಂಗವಾಗಿ ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಸ್ಮರಿಸಲಾಯಿತು. ಅವರ ಗೀತನಾಟಕಗಳು ಇಂದಿಗೂ ಪ್ರಸ್ತುತವಾಗಿದೆ. ಗಾಢ ಅನುಭವಗಳ ಸಫಲ ಅಭಿವ್ಯಕ್ತಿಯನ್ನು ಅವರ ಕೃತಿಗಳಲ್ಲಿ ಕಾಣಬಹುದಾಗಿದೆ ಎಂದು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ಮಂಜುನಾಥ್, ಕಾರ್ಯದರ್ಶಿ ಕೆ.ನಾಗರಾಜು, ಗಿರೀಶ್, ಕುಮಾರ್, ಎನ್. ನರಸಿಂಹಪ್ರಸಾದ್, ಲೋಕೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

