ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಸಭೆ
ಕ.ಪ್ರ.ವಾರ್ತೆ ಮಂಡ್ಯ ಮಾ. 19
ನಗರದ ಪ್ರವಾಸಿ ಮಂದಿರದಲ್ಲಿ ದಸಂಸ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಂಸದ, ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ. ಶ್ರೀನಿವಾಸ್, ಮಾ. 28 ಮತ್ತು 29 ರಂದು ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯುವ ಜಿಲ್ಲಾಮಟ್ಟದ ಕಾರ್ಯಕರ್ತರ ಅಧ್ಯಯನ ಶಿಬಿರದಲ್ಲಿ ಹೆಚ್ಚಿನ ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಂಘಟನೆ ಶಿಸ್ತು ಮತ್ತು ಧ್ಯೇಯೋದ್ದೇಶಗಳಿಗೆ ಸ್ಪಂದಿಸಿ ಸಾಮಾಜಿಕ ಅನಿಷ್ಟ ಪದ್ಧತಿ ವಿರುದ್ಧ ಹಾಗೂ ಸಾಮಾಜಿಕ ಪರಿವರ್ತನೆ ಮಾಡಲು ನಿಲ್ಲಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿ ಮನೆ- ಮನೆಗೆ ತಲುಪಿಸುವ ಕಾರ್ಯ ನಡೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಎಂ. ಕೃಷ್ಣ, ದಲಿತ ಚಳವಳಿ ಗಟ್ಟಿಯಾಗಿ ಉಳಿಯಬೇಕಾದರೆ ದಸಂಸ ಕಾರ್ಯಕರ್ತರು ಯಾವುದೇ ಸ್ವಾರ್ಥವಿಲ್ಲದೆ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಂ.ವಿ. ಕೃಷ್ಣ, ಅರಳಕುಪ್ಪೆ ದೇವರಾಜು, ಎಂ.ಟಿ.ತಿಮ್ಮಯ್ಯ, ಖಜಾಂಚಿ ಹೊಸೂರು ಸ್ವಾಮಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

