ಮಂಡ್ಯ

ಕೌಟುಂಬಿಕ ಕಲಹ: ವ್ಯಕ್ತಿಗೆ ಹಲ್ಲೆ

Published On :

ಕನ್ನಡಪ್ರಭ ವಾರ್ತೆ, ಮಳವಳ್ಳಿ, ಮಾ,21
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಬೆಳ್ತೂರು ದೊಡ್ಡಿ ಗ್ರಾಮದಲ್ಲಿ ಜರುಗಿದೆ.
 ಈ ಗ್ರಾಮದ ಕಲಾವತಮ್ಮ ಎಂಬುವರ ಮಗನಾದ ಮಹೇಂದ್ರ ಅಲಿಯಾಸ್ ನಾಗೇಂದ್ರ ಎಂಬುವರೇ ಹಲ್ಲೆಗೊಳಗಾಗಿರುವ ಗಾಯಾಳುವಾಗಿದ್ದು ತೀವ್ರವಾಗಿ ಗಾಯಗೊಂಡು ಸಾವು ಬದುಕಿನೊಡನೆ ಸೆಣಸಾಡುತ್ತಿರುವ ಇವರನ್ನು  ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
 ಕೌಟುಂಬಿಕ ವಿಚಾರವಾಗಿ ನಾಗೇಂದ್ರ ಹಾಗೂ ನೆರೆಮನೆಯ ವಾಸಿಯಾದ ನಾಗರಾಜು ನಡುವೆ ಬುಧವಾರ ಸಂಜೆ 7-30 ರ ಸಮಯದಲ್ಲಿ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಈ ಸಂದರ್ಭದಲ್ಲಿ ನಾಗರಾಜು ಮಚ್ಚಿನಿಂದ ನಾಗೇಂದ್ರನ ತಲೆಗೆ ಹೊಡೆದನೆಂದು ಪೊಲೀಸರು ತಿಳಿಸಿದ್ದಾರೆ. ತಲೆಗೆ ಪೆಟ್ಟುಬಿದ್ದು ತೀವ್ರ ರಕ್ತಸ್ರಾವ ಉಂಟಾಗಿದ್ದು ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಹಲಗೂರು ಪಿಎಸ್‌ಐ ಗಂಗಾಧರ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.