'ಹೊಸ ಆವಿಷ್ಕಾರ ಅರಿತು ಕರ್ತವ್ಯ ನಿರ್ವಹಿಸಿ'
ಮಂಡ್ಯ: ವೈದ್ಯ ವಿಜ್ಞಾನದಲ್ಲಿ ನಿರಂತರವಾಗಿ ಹೊಸ, ಹೊಸ ಅವಿಷ್ಕಾರಗಳ ಬಗ್ಗೆ ತಿಳಿದುಕೊಂಡು ವೈದ್ಯರು ರೋಗಿಗಳನ್ನು ಗುಣಪಡಿಸಲು ಮುಂದಾಗಬೇಕು ಎಂದು ಡಾ.ಜಿ.ಎಂ ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ, ದಂತ ವೈದ್ಯಕೀಯ ಶಿಕ್ಷಣ ವಿಭಾಗ ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಿರಂತರ ದಂತ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್ ಮಾತನಾಡಿ, ವೈದ್ಯಕೀಯ ಶಿಕ್ಷಣದಲ್ಲಿ ಪ್ರತಿದಿನ ರೋಗಿಗಳ ಚಿಕಿತ್ಸೆಗೆ ಅನು ಕೂಲಕರವಾದ ಮಾಹಿತಿ ಸೇರ್ಪಡೆಗೊಳ್ಳುತ್ತಿರುತ್ತದೆ. ಜಾಗತೀಕರಣದಿಂದಾಗಿ ಇಂದು ಪ್ರಪಂಚದ ಯಾವುದೇ ಮೂಲೆಯಿಂದಲೂ ಬೇಕಾದರೂ ನಾವು ಜ್ಞಾನ ಪಡೆದುಕೊಳ್ಳಬಹುದು. ವೈದ್ಯ ಜಗತ್ತಿಗೆ ಸಂಬಂಧಿಸಿದಂತೆ ತಂತ್ರಜ್ಞಾನದಲ್ಲಿ ಉಂಟಾಗುವ ಬದಲಾವಣೆಗಳು ರೋಗಿಗಳ ಚಿಕಿತ್ಸೆಗೆ ಅನುಕೂಲಕರವಾಗಿರುತ್ತದೆ ಎಂದರು.
ಫರುಕಿಯಾ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ದೀಪಕ್ ಪ್ರಸಾದ್, ಡಾ.ಹನುಮಂತಪ್ರಸಾದ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

