ಎಸ್ಸೆಸ್ಸೆಲ್ಸಿಗೆ 25103 ಪರೀಕ್ಷಾರ್ಥಿಗಳು
ಕನ್ನಡಪ್ರಭ ವಾರ್ತೆ ಮಂಡ್ಯ ಮಾ.25
ಜಿಲ್ಲೆಯಲ್ಲಿ ಏಪ್ರಿಲ್ 1ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 25,103 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಏ.1ರಿಂದ 10 ರವರೆಗೆ ಪರೀಕ್ಷೆ ನಡೆಯಲಿದ್ದು, 1221 ಪುನರಾವರ್ತಿತ ವಿದ್ಯಾರ್ಥಿಗಳು, 728 ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 27,052 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಕುಮಾರ್ ತಿಳಿಸಿದ್ದಾರೆ.
213 ಸರ್ಕಾರಿ ಶಾಲೆ, 18 ಮೊರಾರ್ಜಿ ಶಾಲೆ, 69 ಅನುದಾನಿತ ಹಾಗೂ 114 ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು 414 ಪ್ರೌಢಶಾಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ 99 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇವುಗಳಲ್ಲಿ ನಗರದ ಸೇಂಟ್ಜಾನ್ ಪ್ರೌಢಶಾಲೆ, ರೊಟರಿ ಪ್ರೌಢಶಾಲೆ ಹಾಗೂ ಅರ್ಕೇಶ್ವರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರ ಎಂದು ಗುರುತಿಸಲಾಗಿದೆ.
ಏ.1- ಪ್ರಥಮ, ಏ.3- ವಿಜ್ಞಾನ, ಏ.5- ಇಂಗ್ಲಿಷ್, ಏ.8- ಗಣಿತ, ಏ.9- ಹಿಂದಿ ಹಾಗೂ ಏ.10- ಸಮಾಜ ವಿಜ್ಞಾನ ಪರೀಕ್ಷೆಗಳು ಬೆಳಿಗ್ಗೆ 9-30 ಗಂಟೆಗೆ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಪ್ರೌಢಶಾಲಾ ಮುಖ್ಯಶಿಕ್ಷಕ ವೃಂದದ ಅಧಿಕಾರಿಗಳ ಸ್ಥಾಯಿ ಜಾಗೃತ ದಳ, ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಬ್ಲಾಕ್ಗಳಲ್ಲಿ ಮೂರು ಸಂಚಾರಿ ಜಾಗೃತ ದಳ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖಾ ಮುಖ್ಯಸ್ಥರ ನೇತೃತ್ವದಲ್ಲಿ ಜಿಲ್ಲೆಯ ಎಂಟು ಬ್ಲಾಕ್ಗಳಿಗೆ ತಲಾ ಒಂದರಂತೆ ಸಂಚಾರಿ ಜಾಗೃತ ದಳಗಳನ್ನು ರಚಿಸಲಾಗಿದೆ. ಜಿಲ್ಲಾ ಸಂಚಾರಿ ಜಾಗತ ದಳದ ಸದಸ್ಯರನ್ನಾಗಿ ಚಾಮರಾಜನಗರ ಡಯಟ್ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ.
ಮೌಲ್ಯ ಮಾಪನ ಕೇಂದ್ರಗಳು: ಪರೀಕ್ಷಾ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿಸಲು ಪ್ರತಿ ವಿಷಯಕ್ಕೆ ಒಂದರಂತೆ 6 ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ವಿಷಯಕ್ಕೆ ಓರ್ವ ಅಧಿಕಾರಿಯನ್ನು ವ್ಯವಸ್ಥಾಪಕರನ್ನಾಗಿ ನೇಮಕ ಮಾಡಲಾಗಿದೆ.
1- ಕನ್ನಡ ವಿಷಯ - ಕಾರ್ಮೆಲ್ ಪ್ರೌಢಶಾಲೆ, ಅಸ್ಗರ್ ಅಲಿ, ಉರ್ದು ಸಂಯೋಜಕರು ಉಪನಿರ್ದೇಶಕರ ಕಚೇರಿ, ಮಂಡ್ಯ, 2- ಇಂಗ್ಲಿಷ್ ಸರ್ಕಾರಿ ಪದವಿಪೂರ್ವ ಕಾಲೇಜು ಕಲ್ಲುಕಟ್ಟಡ, ಎಂ.ಎಸ್. ಭಾರತಿ, ಉಪನ್ಯಾಸಕರು, ಡಯಟ್, ಮಂಡ್ಯ., 3- ಹಿಂದಿ - ಸೆಂಟ್ ಜಾನ್ಸ್ ಪ್ರೌಢಶಾಲೆ, ಎಂ.ಪುಟ್ಟಸ್ವಾಮಿ, ವಿಷಯ ಪರಿವೀಕ್ಷಕರು, ಉಪನಿರ್ದೇಶಕರ ಕಚೇರಿ, ಮಂಡ್ಯ., 4- ಗಣಿತ- ಸೆಂಟ್ ಜೋಸೆಫ್ ಪ್ರೌಢಶಾಲೆ, ರಾಜಮಣಿ, ವಿಷಯ ಪರಿವೀಕ್ಷಕರು, ಉಪನಿರ್ದೇಶಕರ ಕಚೇರಿ, ಮಂಡ್ಯ., 5- ವಿಜ್ಞಾನ -ರೋಟರಿ ಪ್ರೌಢಶಾಲೆ, ಗುರುಮೂರ್ತಿ, ವಿಷಯ ಪರಿವೀಕ್ಷಕರು, ಉಪನಿರ್ದೇಶಕರ ಕಚೇರಿ, ಮಂಡ್ಯ., 6- ಸಮಾಜ- ಲಕ್ಷ್ಮಿ ಜನಾರ್ದನ ಬಾಲಿಕಾ ಪ್ರೌಢಶಾಲೆ, ಚಿಕ್ಕಸ್ವಾಮಿ, ವಿಷಯ ಪರಿವೀಕ್ಷಕರು, ಉಉಪನಿರ್ದೇಶಕರ ಕಚೇರಿ, ಮಂಡ್ಯ.
ನಿಷೇಧಿತ ಪ್ರದೇಶ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳು, ಮೌಲ್ಯಮಾಪನ ಕೇಂದ್ರಗಳ 200 ಮೀಟರ್ ಸುತ್ತಳತೆಯನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸೂಚನೆಯಂತೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ, ವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯವನ್ನು ನಿರ್ವಹಿಸಲು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

