ಮಂಡ್ಯ

ಬೆಳ್ಳೂರು ಪಕ್ಷಿಧಾಮ ಅಭಿವೃದ್ಧಿಗೆ ಕ್ರಮ

Published On :

ಕ.ಪ್ರ.ವಾರ್ತೆ  ಮದ್ದೂರು ಮಾ.25
ಕೊಕ್ಕರೆಬೆಳ್ಳೂರು ಪಕ್ಷಿಧಾಮವನ್ನು ವಿದೇಶಿಗರ ಆಕರ್ಷಣೀಯ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾವುದು ತಹಸೀಲ್ದಾರ್ ಡಾ.ಎಚ್.ಎಲ್.ನಾಗರಾಜು ಹೇಳಿದರು.
ತಾಲೂಕಿನ ಕೊಕ್ಕರೆಬೆಳ್ಳೂರು ಗ್ರಾಮದಲ್ಲಿ ಕೆರೆ ಹೂಳು ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಪಕ್ಷಿಧಾಮದಲ್ಲಿನ ಕೆರೆಗಳಲ್ಲಿ ಬಹು ಕಾಲದಿಂದಲೂ ಹೂಳು ತುಂಬಿದೆ. ಒತ್ತುವರಿಯಾಗಿರುವುದು ಗಮನಕ್ಕೆ ಬಂದಿದೆ ಎಂದರು.
ಇದರಿಂದ ಪಕ್ಷಿಧಾಮಕ್ಕೆ ವಲಸೆ ಬರುವ ಹಕ್ಕಿಗಳು ಹಾಗೂ ಗ್ರಾಮದ ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ಇದನ್ನು ಗ್ರಾಮಸ್ಥರು ತಮ್ಮ ಗಮನಕ್ಕೆ ತಂದಿದ್ದು, ಶೀಘ್ರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕೆರೆ ಹೂಳು ತೆಗೆಯುವ ಕಾರ್ಯ ಪೂರ್ಣಗೊಂಡ ನಂತರ ಕೊಕ್ಕರೆಬೆಳ್ಳೂರು ಪಕ್ಷಿಧಾಮವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವುದರ ಜತೆಗೆ ವಿದೇಶಿ ಪ್ರವಾಸಿಗರ ಆಕರ್ಷಣೀಯ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದರು.
ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮಾ.30 ರಂದು ಕೊಕ್ಕರೆ ಬೆಳ್ಳೂರು ಗ್ರಾಮದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುವುದು ಎಂದು ನಾಗರಾಜು ಹೇಳಿದರು.
ಗ್ರಾಪಂ ಅಧ್ಯಕ್ಷ ಚಂದ್ರಣ್ಣ, ರಾಜಸ್ವ ನಿರೀಕ್ಷಕ ಜೈಕುಮಾರ್, ಗ್ರಾಮ ಲೆಕ್ಕಿಗ ಅಂದಾನಿ, ಗೃಹರಕ್ಷಕ ದಳದ ಅಧಿಕಾರಿ ಗಿರೀಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.