ಸಿಎಂ ಇಬ್ರಾಹಿಂ ನೇಮಕ ದಿವಾಳಿಗೆ ಸಾಕ್ಷಿ: ಅಶ್ವತ್ಥ್
ಮಂಡ್ಯ: ಕಾಂಗ್ರೆಸ್ ಪಕ್ಷದ ಚುನಾವಣಾ ರಣನೀತಿ ಅಧ್ಯಕ್ಷರನ್ನಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ನೇಮಕ ಮಾಡಿರುವುದು ಆ ಪಕ್ಷದ ದೀವಾಳಿ ತನಕ್ಕೆ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ಥ್‌ನಾರಾಯಣ ದೂರಿದ್ದಾರೆ. ಕೇಂದ್ರ ಸಚಿವರಾಗಿದ್ದ ವೇಳೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಇರುವ ಇಬ್ರಾಹಿಂ ಅವರನ್ನು ರಣನೀತಿ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕಾಂಗ್ರೆಸ್ ಪಕ್ಷದ ಮತ ರಾಜಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಜ್ಮೀರ್ ದರ್ಗಾಗೆ ಹೋಗಿ ಬಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿರುವುದು ಚುನಾವಣಾ ನೀತಿ ಸಂಹಿತೆ ವಿರುದ್ಧವಾಗಿದೆ. ಅಲ್ಲದೇ ಮುಸ್ಲಿಂ ಮತಗಳ ಒಲೈಕೆಯಾಗಿದೆ ಎಂದು ದೂರಿದ್ದಾರೆ. ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ರಾಜ್ಯದ 6 ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿದೆ. ಅಲ್ಲದೇ ಹಾವೇರಿಯಲ್ಲಿ ನಡೆಸಿದ ವಿಜಯ ಸಂಕಲ್ಪ ಯಾತ್ರೆಯಿಂದ ಕೆಜೆಪಿಗೆ ನುಂಗಲಾರದ ತುತ್ತಾಗಿದೆ. ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿರುವುದು ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸೂಚನೆಯಾಗಿದೆ ಎಂದು ಅಶ್ವತ್ಥ್‌ನಾರಾಯಣ ತಿಳಿಸಿದ್ದಾರೆ.
ರಾಜ್ಯಮಟ್ಟದ ತತ್ವಪದ ಮೇಳ
ಮಂಡ್ಯ: ನಗರದ ಶ್ರೀಕರಿಪುರಿ ಚನ್ನಾರೂಢ ಹೊಂಬಾಳಾರ್ಯ ಶಿಷ್ಯವರ್ಯ ಗುರುಮಠ ಟ್ರಸ್ಟ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾ.27 ರಂದು ರಾಜ್ಯಮಟ್ಟದ ತತ್ವಪದ ಮೇಳವನ್ನು ಚನ್ನಾರೂಢ ಹೊಂಬಾಳಾರ್ಯ ಗುರುಮಠದಲ್ಲಿ ಏರ್ಪಡಿಸಲಾಗಿದೆ. ಪಟ್ಟನಾಯಕನಹಳ್ಳಿ ಶ್ರೀ ನಂಜಾವಧೂತ ಸ್ವಾಮೀಜಿ, ಉರಿಲಿಂಗಪದ್ದಿ ಮಠ ಜ್ಞಾನಪ್ರಕಾಶ್ ಗುರೂಜಿ, ಬೇಬಿಮಠದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿಸ್ವಾವು, ಜೀಗುಂಡಿಪಟ್ಟಣದ ನಾಗರಾಜ ಸ್ವಾಮೀಜಿ, ಬೆಟ್ಟಹಳ್ಳಿ ಮಠದ ಚಂದ್ರಶೇಖರಸ್ವಾಮಿ ಮತ್ತಿತರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಶಾಸಕ ಎಂ.ಶ್ರೀನಿವಾಸ್, ಸಮಾಜ ಸೇವಕ ರವಿಕುಮಾರ್ ಗಣಿಗ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

