ಅತಿಕ್ರಮ, ಕಿರುಕುಳ ಆರೋಪ; ಡಿಸಿ ಕಚೇರಿ ಮುಂದೆ ಧರಣಿ
ಕ.ಪ್ರ.ವಾರ್ತೆ, ಮಂಡ್ಯ, ಮಾ.26
ದಲಿತರಿಗೆ ನೀಡಿರುವ ನಿವೇಶನಗಳಲ್ಲಿ ಸವರ್ಣೀಯರೊಬ್ಬರು ಅಕ್ರಮವಾಗಿ ಮನೆ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಚೀರನಹಳ್ಳಿಯ ಸದರಿ ನಿವೇಶನದ ಕುಟುಂಬದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.
ಚೀರನಹಳ್ಳಿ ಗ್ರಾಮದ ಸಿದ್ದಮ್ಮ, ಮಲ್ಲಯ್ಯ ಮತ್ತು ಕುಟುಂಬಕ್ಕೆ ಸರ್ಕಾರ ನಿವೇಶನ ಮಂಜೂರು ಮಾಡಿದೆ. ಈ ನಿವೇಶನದಲ್ಲಿ ಯಾಲಕ್ಕಿಗೌಡ ಮತ್ತು ದೇವೇಗೌಡ ಎಂಬವರು ರಾತ್ರೋರಾತ್ರಿ ಅಕ್ರಮವಾಗಿ ಮನೆಗಳನ್ನು ಕಟ್ಟುತ್ತಿದ್ದಾರೆ. ನಮ್ಮ ಕುಟುಂಬವನ್ನು ಒಕ್ಕಲೆಬ್ಬಿಸಲು ಕಿರುಕುಳ ನೀಡುತ್ತಿದ್ದಾರೆ ಎಂದು ಮಲ್ಲಯ್ಯ ದೂರಿದರು.
ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶ ಮಾಡಿ ದಲಿತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಸರ್ಕಾರ ನಮಗೆ ನೀಡಿರುವ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸುತ್ತಿರುವುದನ್ನು ತಡೆಹಿಡಿದು ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಾವಿತ್ರಿ, ಮಲ್ಲಯ್ಯ, ಸಿದ್ದಮ್ಮ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

