ಮಂಡ್ಯ

ನಾಗರಾಜ್ ಕೊಂದ ಮೂವರ ಬಂಧನ: ಚಿನ್ನ ವಶ

Published On :

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ ಮಾ.26
ತಾಲೂಕಿನ ರಾಯಸಮುದ್ರ ಬಳಿಯ ನಾರಾಯಣದುರ್ಗ ಅರಣ್ಯ ಪ್ರದೇಶದಲ್ಲಿ ಕಾರಿನ ಸಮೇತ ವ್ಯಕ್ತಿಯೊಬ್ಬನನ್ನು ಸುಟ್ಟು ಹಾಕಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮೂವರನ್ನು ಬಂಧಿಸಿ, 5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಮೈಸೂರಿನ ಅಶೋಕಪುರಂ ನಿವಾಸಿ ನಾಗರಾಜ ಅಲಿಯಾಸ್ ನಾಗ ಮೃತಪಟ್ಟಿದ್ದು ಎಂಬುದು ಪತ್ತೆಯಾಗಿದೆ. ಆರೋಪಿ ಬಿಲ್ಲರಾಮನಹಳ್ಳಿಯ ಪುಟ್ಟಸ್ವಾಮಿ ಪುತ್ರ ಮುದ್ದುಕುಮಾರ್‌ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ನಾಗರಾಜ ಮತ್ತು ಮುದ್ದುಕುಮಾರ್, ಬೆಂಗಳೂರಿನ ಸೋಲದೇವನಹಳ್ಳಿಯ ವ್ಯಾಪ್ತಿಗೆ ಸೇರಿದ ಚಿಕ್ಕಸಂದ್ರ ಬಡಾವಣೆ ನಿವಾಸಿಯಾದ ಕೆ.ಎಸ್.ರವಿಶಂಕರ್ ಅವರ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡಿದ್ದರು. ಅಲ್ಲದೆ, ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಆಲ್ಟೋ ಕಾರನ್ನು ಅಪಹರಿಸಿದ್ದರು. ಕಳ್ಳತನ ಮಾಡಿರುವ ಚಿನ್ನದ ಒಡವೆಗಳನ್ನು ತಾನೇ ಇಟ್ಟುಕೊಳ್ಳುವ ಉದ್ದೇಶದಿಂದ ಮುದ್ದುಕುಮಾರ್, ನಾಗರಾಜನಿಗೆ ಕಂಠಪೂರ್ತಿ ಮದ್ಯ ಕುಡಿಸಿದ ನಂತರ ನಾರಾಯಣದುರ್ಗದ ಅರಣ್ಯ ಪ್ರದೇಶದಲ್ಲಿ ಕಾರಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದನು.
ಆರೋಪಿ ಮುದ್ದುಕುಮಾರ್ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಸಬ್‌ಇನ್ಸ್‌ಪೆಕ್ಟರ್ ರಂಗಸ್ವಾಮಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಆರೋಪಿ ನೀಡಿದ ಮಾಹಿತಿ ಮೇರೆಗೆ ಪೊಲೀಸರು 5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಆರೋಪಿಗೆ ಸಹಕಾರ ನೀಡಿದ ಪತ್ನಿ ವರಲಕ್ಷ್ಮಿ ಹಾಗೂ ಅತ್ತೆ ಶಿವಲಿಂಗಮ್ಮ ಅವರನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬಹುಮಾನ ಘೋಷಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.