ಮಂಡ್ಯ

ಹಣ ವಹಿವಾಟು ಮೂಲಗಳ ಮೇಲೆ ನಿಗಾ ವಹಿಸಿ: ಡಿಸಿ

Published On :

ಕನ್ನಡಪ್ರಭ ವಾರ್ತೆ ಮಂಡ್ಯ ಮಾ.26
ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಓಲೈಸಲು ಹಣದ ಆಮಿಷ ಒಡ್ಡುವ ಸಾಧ್ಯತೆ ಇರುವುದರಿಂದ ಹಣದ ವಹಿವಾಟು ನಡೆಯುವ ಎಲ್ಲಾ ಮೂಲಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ  ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಬ್ಯಾಂಕ್ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಲ್‌ಐಸಿ, ಆದಾಯ ತೆರಿಗೆ ಇಲಾಖೆ ಮುಂತಾದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕುಗಳು ಈ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಎಲ್ಲಾ ಬ್ಯಾಂಕ್ ಖಾತೆಗಳ ವಹಿವಾಟಿನ ಕಡೆಗೆ ಗಮನಹರಿಸಬೇಕು. ಅಸಹಜ ರೀತಿಯಲ್ಲಿ ಹಣ ತೆಗೆದರೆ ಅಂತಹವರ ವಿವರವನ್ನು ಸೂಕ್ತ ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಬ್ಯಾಂಕ್ ಖಾತೆಗಳ ಮೂಲಕವೂ ಕೆಲವು ಅಕ್ರಮಗಳು ನಡೆಯುವ ಸಾಧ್ಯತೆ ಇದೆ. ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳು ಹಾಗೂ ನೌಕರರನ್ನು ಸೂಕ್ಷ್ಮ ವೀಕ್ಷಕರಾಗಿ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಜಿಪಂ ಸಿಇಓ ಪಿ.ಸಿ. ಜಯಣ್ಣ ಸೂಕ್ಷ್ಮ ವೀಕ್ಷಕರ ಪಾತ್ರ ಏನು ಎಂಬ ಬಗ್ಗೆ ವಿವರಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಎನ್. ರಾಜಣ್ಣ, ಅಪರ ಜಿಲ್ಲಾಧಿಕಾರಿ ಶಂಕರಪ್ಪ, ನಗರಸಭೆ ಪೌರಾಯುಕ್ತೆ ಹೆಪ್ಸಿಬಾರಾಣಿ ಕೊರ್ಲಪಾಟಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜು, ಪ್ರೊಬೇಷನರಿ ಉಪವಿಭಾಗಾಧಿಕಾರಿ ಶಿವಾನಂದ ಕರಾಳೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.