ಎಸ್ಸೆಸ್ಸೆಲ್ಸಿ: 2940 ವಿದ್ಯಾರ್ಥಿಗಳು

Updated on: 

ನಾಗಮಂಗಲ: ಏ.1ರಿಂದ ಆರಂಭಗೊಳ್ಳುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ 2940 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಅನಂತರಾಜು ತಿಳಿಸಿದ್ದಾರೆ.
ಪರೀಕ್ಷೆ ಹಿನ್ನೆಲೆಯಲ್ಲಿ ಅಗತ್ಯ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷೆಗಾಗಿ 12 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 127 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ತಾಲೂಕು ನೋಡಲ್ ಅಧಿಕಾರಿಯಾಗಿ ಎಂ.ಎನ್. ಮಂಜುನಾಥ್ ್ಸೇರಿದಂತೆ 144 ಮಂದಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ತಾಲೂಕಿನ ಎಲ್ಲಾ ಕೇಂದ್ರಗಳಲ್ಲಿ 2940 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಸರ್ಕಾರಿ ಪದವಿಪೂರ್ವ ಕಾಲೇಜು, ಮಾದರಿ ಶಾಲೆ ಸೇರಿದಂತೆ ಆದಿಚುಂಚನಗಿರಿ, ಬೆಳ್ಳೂರು. ಬಿ.ಜಿ.ನಗರ, ಕದಬಹಳ್ಳಿ, ಹೊನ್ನಾವರ, ಬಿಂಡಿಗನವಿಲೆ, ಬೋಗಾದಿ, ಚೀಣ್ಯ, ದೇವಲಾಪುರ, ಮೈಲಾರಪಟ್ಟಣ ಪರೀಕ್ಷಾ ಕೇಂದ್ರಗಳಾಗಿವೆ. ವಿಚಕ್ಷಣಾದಳ, ಜಾಗೃತ ದಳ ಸೇರಿದಂತೆ ಎಲ್ಲಾ ಮೇಲ್ವಿಚಾರಕರ ಸಭೆ ನಡೆಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಎಲ್ಲಾ ಕೇಂದ್ರಗಳಿಗೆ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com