ಪಾಂಡವಪುರ: ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಟ್ಟಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ನಡೆದಿದೆ. ತಾಲೂಕಿನ ಕೆರೆತೊಣ್ಣೂರು ಗ್ರಾಮದ ಲೇಟ್ ನಾಗರಾಜು ಪುತ್ರ ಸಂತೋಷ್(26) ಮೃತರು. ಕಾರ್ಯನಿಮಿತ ಶ್ರೀರಂಗಪಟ್ಟಣಕ್ಕೆ ಹೋಗಿ ವಾಪಸ್ ತಮ್ಮ ಗ್ರಾಮಕ್ಕೆ ಹೋಗುವ ವೇಳೆ, ಹಿಂದಿನಿಂದ ಬಂದ ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಸ್ಕೂಟರ್ ಸವಾರ ಸಂತೋಷ್ ತಲೆಗೆ ಗಂಭೀರ ಪೆಟ್ಟಾಗಿದೆ. ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿದ್ದಾರೆ. ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿರ್ಮಲ ಭಾರತ ಅಭಿಯಾನ
ಕೆ.ಆರ್.ಪೇಟೆ: ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕಿನ ಸಾಕ್ಷರತಾ ಪ್ರೇರಕರಿಗೆ ನಿರ್ಮಲ ಭಾರತ ಅಭಿಯಾನದ ಯಶಸ್ವಿ ಅನುಷ್ಠಾನ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಬಯಲು ಮಲವಿಸರ್ಜನೆಯಿಂದ ಗ್ರಾಮೀಣ ಪ್ರದೇಶದ ಜನರು ಹಲವಾರು ಸಾಂಕ್ರಾಮಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ಅನಾಹುತಗಳ ಬಗ್ಗೆ ಜನರಲ್ಲಿ ಅರಿವಿನ ಜಾಗೃತಿ ಮೂಡಿಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಪ್ರೇರಕರಿಗೆ ತಿಳಿಸಲಾಯಿತು.