ವೇಶ್ಯಾವಾಟಿಕೆ: ಇಬ್ಬರು ಯುವಕರ ಬಂಧನ

Updated on: 

ಮಳವಳ್ಳಿ: ಮೈಸೂರಿನಿಂದ ಅಕ್ರಮವಾಗಿ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ಮಳವಳ್ಳಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಕಾರು ಮೆಕಾನಿಕ್ ಆಗಿರುವ ಇಮ್ರಾನ್ ಪಾಷ ಹಾಗೂ ಮೈಸೂರು ಜಿಲ್ಲೆ ಹುಣಸೂರಿನ ಶಿವಕುಮಾರ್ ಎಂಬುವವರೆ ಹುಡುಗಿಯರನ್ನು ಬೇರೆಕಡೆಗಳಿಂದ ಕರೆತಂದು ಪಟ್ಟಣದಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವವರಾಗಿದ್ದಾರೆ. ಬಂಧಿತರು ಗುರುವಾರ ರಾತ್ರಿ ಮೈಸೂರಿನಿಂದ ಇಬ್ಬರು ಯುವತಿಯರನ್ನು ಕರೆತಂದು ಪಟ್ಟಣದ ಎನ್‌ಇಎಸ್ ಬಡಾವಣೆ ಅನಿತಾ ಕಾನ್ವೆಂಟ್ ರಸ್ತೆಯಲ್ಲಿರುವ ಮನೆಯನ್ನು ಬಾಡಿಗೆಗೆ ಪಡೆದಿದ್ದರೆನ್ನಲಾಗಿದೆ. ಮನೆ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಪಟ್ಟಣದ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ ಹಾಗೂ ತಂಡ ರಾತ್ರಿ ಸದರಿ ಮನೆಯ ಮೇಲೆ ದಾಳಿ ನಡೆಸಿ ಮನೆಯಲ್ಲಿದ್ದ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ದಾಳಿಯಲ್ಲಿ  ಮನೆಯಲ್ಲಿದ್ದ ಇಬ್ಬರು ಯುವತಿಯರನ್ನು ಮಂಡ್ಯ ಮಹಿಳಾ ಸ್ವೀಕೃತಿ ಕೇಂದ್ರಕ್ಕೆ ಒಪ್ಪಿಸಿದ್ದು ಇಮ್ರಾನ್ ಹಾಗೂ ಶಿವಕುಮಾರ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com