ಹೇಮಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ

Updated on: 

ಮಂಡ್ಯ:  ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 31 ರಂದು 15,414 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿ ಇದೆ. ಜುಲೈ 31 ರಂದು ಬೆಳಿಗ್ಗೆ 6 ಗಂಟೆಗೆ 2916.70 ಅಡಿಗಳಿದೆ ಎಂದು ಗೊರೂರು ಹೇಮಾವತಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ. ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ನಿರೀಕ್ಷೆಯಿರುತ್ತದೆ. ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಅಣೆಕಟ್ಟೆಯ ಕ್ರೆಸ್ಟ್‌ಗೇಳಿಂದ ಯಾವುದೇ ಸಮಯಲ್ಲಾದರೂ ನದಿ ಪಾತ್ರಕ್ಕೆ ನೀರನ್ನು ಬೀಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಹೇಮವತಿ ನದಿ ದಂಡೆಯಲ್ಲಿ ವಾಸಿಸುವ ಗ್ರಾಮಸ್ಥರು ಮುನ್ನೇಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ. ಈ ಸಂದರ್ಭದಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ತುರ್ತು ಕ್ರಮ ತೆಗೆದುಕೊಂಡು ಮುಂಜಾಗೃತಾ ಕ್ರಮ ವಹಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com