'ಎದೆಹಾಲಿನಿಂದ ತಾಯಿ- ಮಗು ಬಾಂಧವ್ಯ ವೃದ್ಧಿ'
ಕ.ಪ್ರ.ವಾರ್ತೆ ರಾವಂದೂರು ಆ. 1
ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತದೆ ಎಂಬ ಮೂಢನಂಬಿಕೆಯಿಂದ ಮಹಿಳೆಯರು ಸ್ತನ್ಯಪಾನ ಮಾಡಿಸದೆ ಇರಬಾರದು ಎಂದು ವೈದ್ಯಾಧಿಕಾರಿ ಡಾ.ಸಿ. ಪುನೀತ್ ಹೇಳಿದರು.
ತಾಲೂಕಿನ ರಾವಂದೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ರಾಪಂ ಲೋಕ ಶಿಕ್ಷಣ ಕೇಂದ್ರದ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಯಿಯ ಎದೆಹಾಲು ಕುಡಿಸುವುದರಿಂದ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸ್ತನ್ಯಪಾನ ಮಾಡಿಸುವುದರಿಂದ ಶೇ. 22 ರಷ್ಟು ಮಕ್ಕಳ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು. ತಾಯಿಯ ಹಾಲು ಮಾತ್ರ ಮಗುವಿಗೆ ಸಂಪೂರ್ಣ ಆಹಾರ. ಇದು ಸುಲಭವಾಗಿ ಜೀರ್ಣವಾಗುವ ಸ್ವಚ್ಛ, ಸುರಕ್ಷಿತ ಆಹಾರವಾಗಿದ್ದು, ಮಗುವಿನ ಬೆಳವಣಿಗೆಗೆ ಅತ್ಯವಶ್ಯಕ. ಅಲ್ಲದೆ, ತಾಯಿ ಮಗುವಿನ ಬಾಂಧವ್ಯ ಹೆಚ್ಚಿಸುತ್ತದೆ ಎಂದು ತಿಳಿಸಿದರು. ಮುಖ್ಯೋಪಾಧ್ಯಾಯ ಲಕ್ಕಯ್ಯ, ಸಿಆರ್ಪಿ ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆ ರಾಜಾಮಣಿ, ಸರಸ್ವತಿ, ಆರೋಗ್ಯ ಇಲಾಖೆ ಮಹೇಂದ್ರ, ಪ್ರೇರಕ ಮುಕುಂದ ಇದ್ದರು.
ಸ್ತನ್ಯಪಾನ ಸಪ್ತಾಹ ಉದ್ಘಾಟನೆ
ಕೆ.ಆರ್. ನಗರ: ಮಗು ಜನಿಸಿದ ನಂತರ 6 ತಿಂಗಳವರೆಗೆ ತಾಯಿಯ ಹಾಲು ಅತ್ಯಂತ ಅವಶ್ಯಕವಾಗಿದ್ದು, ಈ ಬಗ್ಗೆ ತಾಯಂದಿರು ಹೆಚ್ಚು ಗಮನ ಹರಿಸಬೇಕೆಂದು ಮಕ್ಕಳ ತಜ್ಞ ಡಾ. ಅಶೋಕ್ ಸಲಹೆ ನೀಡಿದರು. ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚೆಗೆ ಪ್ರಜ್ಞಾವಂತರಲ್ಲಿಯೇ ತಾಯಿ ಹಾಲು ಕುಡಿಸುವ ಅಭ್ಯಾಸ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು. ಹೆರಿಗೆಯಾದ ಅರ್ಧ ಗಂಟೆಯೊಳಗೆ ಹಾಲು ಕುಡಿಸಲು ಆರಂಭಿಸಬೇಕು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ. ಶಿವಪ್ರಸಾದ್ ಮಾತನಾಡಿದರು. ಡಾ. ಕುಮುದ, ರೋಟರಿ ಕ್ಲಬ್ ಅಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ರವಿಶಂಕರ್, ಲೋಕನಾಥ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

