ನಿವೇಶನ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಟಿ.ನರಸೀಪುರ ಆ. 2
ನಾಗಲಗೆರೆ ದಲಿತರ ನಿವೇಶನ ರಕ್ಷಿಸುವಂತೆ ಒತ್ತಾಯಿಸಿ ದಸಂಸ ಮುಖಂಡರು ಹಾಗೂ ಗ್ರಾಮಸ್ಥರು ತಾಲೂಕು ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು.
ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಜಮಾವಣೆಗೊಂಡ ದಸಂಸ ಕಾರ್ಯಕರ್ತರು, ಮುಖಂಡರು ಮತ್ತು ನಾಗಲಗೆರೆ ಗ್ರಾಮಸ್ಥರು ಸರ್ಕಾರ ಹಾಗೂ ನಿರ್ಲಕ್ಷ್ಯದಿಂದಾಗಿ ನಲವತ್ತಕ್ಕೂ ಹೆಚ್ಚು ದಲಿತ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದ ನಿವೇಶನಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಆರೋಪಿಸಿ ಪ್ರತಿಭಟನಾ ಧರಣಿ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಆಲಗೂಡು ಶಿವಕುಮಾರ್ ಮಾತನಾಡಿದರು. ಸ್ಥಳಕ್ಕಾಗಾಮಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ. ವೆಂಕಟೇಶ್ ಹಾಗೂ ತಹಸೀಲ್ದಾರ್ ಎಚ್.ಎಸ್. ಅರುಣಪ್ರಭ ಮನವಿ ಪತ್ರ ಸ್ವೀಕರಿಸಿ, ಪರಿಹಾರ ಹಣ ಸಿಗದ್ದಕ್ಕೆ ನ್ಯಾಯಾಲಯದ ಮೊರೆ ಹೋಗಿರುವ ಭೂಮಿಯ ಮಾಲೀಕರ ಮನವೊಲಿಸಿ, ಪರಿಹಾರ ಹಣ ಮಂಜೂರು ಮಾಡಿ, ದಲಿತರ ನಿವೇಶನಗಳನ್ನು ರಕ್ಷಣೆ ಮಾಡುತ್ತೇವೆ. ಸ್ಥಳೀಯ ನ್ಯಾಯಾಲಯದ ಆದೇಶಕ್ಕೆ ತಾಲೂಕು ಆಡಳಿತದಿಂದಲೇ ತಡೆಯಾಜ್ಞೆ ಕೋರಿ ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ದಸಂಸ ತಾಲೂಕು ಸಂಚಾಲಕ ರಾಜು, ಸಂಘಟನಾ ಸಂಚಾಲಕ ಮಹದೇವಯ್ಯ, ಮುಖಂಡರಾದ ಮಾವಿನಹಳ್ಳಿ ಶಿವಣ್ಣ, ನಾಗೇಶ್, ಹಿರಿಯೂರು ಸೋಮಣ್ಣ, ಸೋಸಲೆ ಶಿವಣ್ಣ, ಸಿದ್ದರಾಜು, ಮಹದೇವ, ಮಹೇಶ, ಶಿವಪ್ರಕಾಶ್, ರವೀಂದ್ರ, ನಾಗಲಗೆರೆ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

