ಮೈಸೂರು

ನೌಕರರ ಹಿತ ಕಾಪಾಡಲು ಬದ್ಧ: ಯದುಗಿರೀಶ್

Published On :

ಕ.ಪ್ರ.ವಾರ್ತೆ ಕೆ.ಆರ್. ನಗರ ಆ. 2
ತಾಲೂಕು ಸರ್ಕಾರಿ ನೌಕರರ ಹಿತ ಕಾಪಾಡಲು ಅವರೊಂದಿಗೆ ಕೆಲಸ ಮಾಡಿ, ಸದಸ್ಯರ ಸಲಹೆ- ಸೂಚನೆಯಂತೆ ಸಂಘದ ಕಾರ್ಯಚಟುವಟಿಕೆ ವಿಸ್ತರಿಸುವುದಾಗಿ ಸಂಘದ ನೂತನ ಅಧ್ಯಕ್ಷ ಎಂ.ಎಸ್. ಯದುಗಿರೀಶ್ ಹೇಳಿದರು.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿ, ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನನ್ನನ್ನು ಬಹುಮತದಿಂದ ಚುನಾಯಿಸುವ ಮೂಲಕ ಸಂಘದ ಸದಸ್ಯರ ಹಿತಾಸಕ್ತಿ ಕಾಪಾಡಿಕೊಂಡು ಕೆಲಸ ಮಾಡಲು ನಿರ್ದೇಶಕರು ಅವಕಾಶ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಆಡಳಿತ ಮಂಡಳಿಯ ಸಭೆ ಕರೆದ ನಂತರ ಚರ್ಚಿಸಿ ಉತ್ತಮ ಕೆಲಸ ಮಾಡುವುದರ ಜೊತೆಗೆ ಸಂಘದ ಅಭಿವೃದ್ಧಿಗೆ ಎಲ್ಲರ ಸಹಕಾರ, ಸಹಾಯ ಪಡೆಯಲಾಗುತ್ತದೆ. ಇದಕ್ಕೆ ಪ್ರತಿಯೊಬ್ಬರ ಮಾರ್ಗದರ್ಶನ ಬೇಕೆಂದು ಕೋರಿ ಸದಸ್ಯರ ಹಿತ ಕಾಪಾಡುವುದು ಸಂಘದ ಮೊದಲ ಆದ್ಯತೆಯಾಗಿರುತ್ತದೆ ಎಂದು ಹೇಳಿದರು.
ಸಂಘದ ಮೇಲಂತಸ್ತಿನ ಕಟ್ಟಡ ಉದ್ಘಾಟನೆಯನ್ನು ಶೀಘ್ರದಲ್ಲೆ ನೆರವೇರಿಸಿ, ಕ್ರಿಯಾತ್ಮಕ ಚಟುವಟಿಕೆ ಹಮ್ಮಿಕೊಂಡು ಸದಸ್ಯರ ಪರಸ್ಪರ ಸಂಪರ್ಕ ಸೇತುವನ್ನು ರೂಪಿಸಲಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
ಇನ್ನು ಮುಂದೆ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ಎಲ್ಲ ಸದಸ್ಯ ಬಂಧುಗಳ ಸಂಕಷ್ಟಗಳಿಗೆ ಸ್ಪಂದಿಸುವ ಕೇಂದ್ರ ಸ್ಥಾನವಾಗಿ ಜವಾಬ್ದಾರಿಯಿಂದ ಸದಸ್ಯರ ಆಶಯಕ್ಕೆ ತಕ್ಕಂತೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತದೆ ಎಂದು ವಿಶ್ವಾಸದಿಂದ ನುಡಿದರು.

ಮುತ್ತತ್ತಿ, ಚಿದರವಳ್ಳಿ: ಕ್ಷೀರಭಾಗ್ಯ
ಟಿ. ನರಸೀಪುರ: ತಾಲೂಕಿನ ಚಿದರವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಕೊರತೆ ನೀಗಿಸಬೇಕೆಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಜಾಯಿದ್ ಉಲ್ಲಾ ಆಗ್ರಹಿಸಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹಾಲನ್ನು ವಿತರಿಸಿ, ಸರ್ಕಾರದ ಕ್ಷೀರಭಾಗ್ಯ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಒಟ್ಟು 335 ಮಕ್ಕಳ ಸಂಖ್ಯೆ ಇರುವ ಶಾಲೆಯಲ್ಲಿ ಮುಖ್ಯ ಶಿಕ್ಷಕರು ಸೇರಿದಂತೆ ಐವರು ಶಿಕ್ಷಕರ ಕೊರತೆ ಇರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ ಎಂದು ಹೇಳಿದರು. ಸಿಆರ್ಪಿ ಕೃಷ್ಣಮೂರ್ತಿ, ಪ್ರಭಾರ ಮುಖ್ಯ ಶಿಕ್ಷಕಿ ಸುನಂದಕುಮಾರಿ, ಶಿಕ್ಷಕರಾದ ಸಿದ್ದಮಲ್ಲಪ್ಪ, ರಶ್ಮಿ, ಟಿ.ಸಿ. ರಾಜೇಶ್, ಪುಟ್ಟರಾಜು, ನಂಜುಂಡೇಗೌಡ, ಸಿದ್ದರಾಜು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.