ಮೈಸೂರು

ವರದರಾಜು ತಾ. ನೌಕರರ ಸಂಘದ ಅಧ್ಯಕ್ಷ

Published On :

ಕ.ಪ್ರ.ವಾರ್ತೆ ಹುಣಸೂರು ಆ. 2
ರಾಜ್ಯ ಸರ್ಕಾರಿ ನೌಕರರ ಸಂಘದ ಹುಣಸೂರು ತಾಲೂಕು ಘಟಕದ ಅಧ್ಯಕ್ಷರಾಗಿ ನ್ಯಾಯಾಂಗ ಇಲಾಖೆಯ ವರದರಾಜು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಚುನಾವಣೆಯಲ್ಲಿ ಒಟ್ಟು 35 ನಿರ್ದೇಶಕರ ಪೈಕಿ ಸಮಾಜ ಕಲ್ಯಾಣ ಮತ್ತು ಅರಣ್ಯ ಇಲಾಖೆಯ ಎರಡು ಸ್ಥಾನಗಳಿಗೆ ಚುನಾವಣೆ ನಡೆದಿಲ್ಲ. ಹಾಲಿ 33 ನಿರ್ದೇಶಕರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ನರಸಿಂಹ ಸ್ಪರ್ಧಿಸಿ 14 ಮತಗಳನ್ನು ಪಡೆದು ಸೋತರೆ, ನ್ಯಾಯಾಂಗ ಇಲಾಖೆಯ ವರದರಾಜು 18 ಮತ ಪಡೆದು ಆಯ್ಕೆಯಾಗಿದ್ದಾರೆ. ರಾಜ್ಯ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಬೋಪಾಲ್ 6 ಮತ ಪಡೆದು ಪರಾಭವಗೊಂಡರು. ಇವರ ಪ್ರತಿಸ್ಪರ್ಧಿ ಕಂದಾಯ ಇಲಾಖೆಯ ಶಿವಲಿಂಗಪ್ಪ 25 ಮತ ಪಡೆದು ಆಯ್ಕೆಯಾದರು.
ಗಾವಡಗೆರೆ ಪ್ರೌಢಶಾಲೆಯ ಶಿಕ್ಷಕ ಲೋಕೇಶ್ ಖಜಾಂಚಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ನರಸಿಂಹಮೂರ್ತಿ ತಿಳಿಸಿದ್ದಾರೆ.

ನಿರಂತರ ಮಳೆ: ಹಾಳಾಗುತ್ತಿರುವ ಬೆಳೆ
ಕ.ಪ್ರ.ವಾರ್ತೆ ಎಚ್.ಡಿ.ಕೋಟೆ ಆ. 2
ತಾಲೂಕಿನಲ್ಲಿ ಕಳೆದ ಒಂದು ತಿಂಗಳಿಂದಲೂ ನಿರಂತರವಾಗಿ ಸುರಿದ ಮಳೆಯಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ರೈತರು ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಇಂತಹ ಮಳೆಯು ಬಂದಿಲ್ಲ. ಎರಡು ವರ್ಷಗಳಿಂದಲೂ ಕಡಿಮೆ ಮಳೆಯಾದ ಪರಿಣಾಮ, ಅಪಾರ ಪ್ರಮಾಣದಲ್ಲಿ ರೈತರು ಬೆಳೆದ ಫಸಲನ್ನು ಹಿಂದಕ್ಕೆ ಪಡೆಯಲು ಸಾಧ್ಯವಾಗದೆ ಬರಗಾಲ ಸಂಭವಿಸಿದ್ದು, ಈ ಬಾರಿ ಆರಂಭದಲ್ಲಿ ಬಂದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ನೋಡಬಹುದಾಗಿತ್ತು.
ನಂತರ ಕಳೆದ ಒಂದು ತಿಂಗಳಿಂದಲೂ ನಿರಂತರವಾಗಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ರೈತರು, ತಮ್ಮ ಜಮೀನುಗಳಲ್ಲಿ ಹಾಕಿರುವ ಹತ್ತಿ, ಹೊಗೆಸೊಪ್ಪು, ರಾಗಿ, ದ್ವಿದಳ ದಾನ್ಯಗಳು ರೈತರ ಕೈಸೇರುವುದು ಅನುಮಾನವಾಗಿದೆ. ಹೊಲಗಳಲ್ಲಿ ಅಪಾರ ಪ್ರಮಾಣದ ನೀರು ನಿಂತಿದ್ದು, ಬೆಳೆಗಳು ಕೆಂಚು ಬಣ್ಣಕ್ಕೆ ತಿರುಗಿ ಕೊಳೆಯಲಾರಂಭಿಸಿದೆ.
ಜಮೀನುಗಳಲ್ಲಿ ಅಪಾರ ಪ್ರಮಾಣದಲ್ಲಿ ಮೇವು ಇದ್ದರೂ ಜಾನುವಾಗಳು ಮೇಯಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ಮಳೆಯು ಆಗುತ್ತಿರುವುದರಿಂದ ತಾಲೂಕಿನ ಹಲವು ಕಡೆಗಳಲ್ಲಿ ಮನೆಯ ಗೋಡೆಗಳು ಕುಸಿದು ಬಿದ್ದಿದೆ. ಇದರಿಂದ ರೈತರು ಹಾಗೂ ಸಾರ್ವಜನಿಕರು ಕಂಗಲಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.