ಮೈಸೂರು

ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಲಿ

Published On :

ಕ.ಪ್ರ.ವಾರ್ತೆ ಟಿ.ನರಸೀಪುರ ಆ. 3
ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ನಿಲಯಪಾಲಕರು ಹೆಚ್ಚಿನ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜೇಶ್‌ಗೌಡ ಹೇಳಿದರು.
ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಶನಿವಾರ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಅಧಿಕಾರಿ ಹಾಗೂ ನಿವೃತ್ತಿಯಾದ ನಿಲಯಪಾಲಕ ಮತ್ತು ಅಡುಗೆ ಸಿಬ್ಬಂದಿಯನ್ನು ಸನ್ಮಾನಿಸಿ ಬೀಳ್ಳೋಡುಗೆ ನೀಡಿ ಮಾತನಾಡಿ, ಪರಿಶಿಷ್ಟರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಅರ್ಹರಿಗೆ ತಲುಪಿಸಬೇಕು ಎಂದರು.
ನಿಯಮ ಪಾಲಿಸುವ ಮೂಲಕ ಶಿಸ್ತಿನಿಂದಲೇ ವಿದ್ಯಾರ್ಥಿಗಳ ಭವಿಷ್ಯವನ್ನು ಸುಭದ್ರಗೊಳಿಸಬೇಕು. ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಯ ಕಾಳಜಿ ಇರಲಿ. ಇದ್ದಷ್ಟು ದಿನ ಬಿ.ಎಂ. ಪ್ರಕಾಶ್ ಅವರು ಇಲಾಖೆಯಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ನಿರ್ಗಮಿತ ಸಮಾಜ ಕಲ್ಯಾಣಾಧಿಕಾರಿ ಬಿ.ಎಂ. ಪ್ರಕಾಶ್ ಮಾತನಾಡಿ, ತಾವು ಸೇವೆ ಸಲ್ಲಿಸಿದ ಅವಧಿಯಲ್ಲಿ ಸಿಬ್ಬಂದಿ ಹಾಗೂ ನಿಲಯ ಪಾಲಕರು ಹೆಚ್ಚಿನ ಸಹಕಾರ ನೀಡಿದ್ದಾರೆ. ಆಡಳಿತದಲ್ಲಿ ಸುಧಾರಣೆ ತರುವ ಉದ್ದೇಶದಿಂದ ತಾವೇನಾದರೂ ನಿಮಗೆ ನೋವನ್ನುಂಟು ಮಾಡಿದ್ದರೆ, ಅದನ್ನು ಆಡಳಿತಾತ್ಮಕ ಹಿನ್ನೆಲೆಯಲ್ಲಿ ಸ್ವೀಕರಿಸಬೇಕು ಎಂದು ವಿನಂತಿಸಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಾಗಿ ವರ್ಗಾವಣೆಗೊಂಡ ಬಿ.ಎಂ. ಪ್ರಕಾಶ್ ಸೇರಿದಂತೆ ಸೇವೆಯಿಂದ ನಿವೃತ್ತಿಯಾದ ನಿಲಯ ಪಾಲಕ ಅಂದಾನಿಗೌಡ, ಅಡುಗೆಯವರಾದ ತಾಯಮ್ಮ, ಜಯಮ್ಮ ಹಾಗೂ ಕುಪ್ಯ ತಾಯಮ್ಮ ಅವರನ್ನು ಸನ್ಮಾನಿಸಿ ಬೀಳ್ಕೋಡುಗೆ ನೀಡಲಾಯಿತು.
ಪ್ರಭಾರ ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ, ಎಫ್‌ಡಿಎ ಕೃಷ್ಣಪ್ಪ, ನಿಲಯಪಾಲಕರಾದ ನಾಗರಾಜಮ್ಮ, ಪುಟ್ಟಮ್ಮ, ಮಹದೇವಮ್ಮ, ಕಮಲಾಕ್ಷಿ, ಎಸ್. ಶಿವಪ್ಪ, ರಾಮಚಂದ್ರ, ಕೆ. ಉಮೇಶ್, ಎನ್. ಶಿವಲಿಂಗಮೂರ್ತಿ, ಮಹಾಂತೇಶ್, ಮಹೇಶ್, ಸರೋಜ, ಶಾಂತಿ, ಸುಜಾತ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.