ಶಾಲಾ ವಾಹನ ಚಾಲಕರ ಪೂರ್ವಾಪರ ತಿಳಿಯಿರಿ
ಟಿ. ನರಸೀಪುರ: ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ವಾಹನಗಳಿಗೆ ವಿಮಾ ಸೌಲಭ್ಯ ಹಾಗೂ ಚಾಲಕನಿಗೆ ಚಾಲನಾ ಪರವಾನಗಿ ಇದೆಯೇ ಎಂಬುದನ್ನು ಶಾಲೆಗಳ ಮುಖ್ಯ ಶಿಕ್ಷಕರು ಖಚಿತಪಡಿಸಿಕೊಳ್ಳಬೇಕು ಎಂದು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಎಸ್. ಸುಂದರರಾಜ್ ಹೇಳಿದರು.
ಪಟ್ಟಣದ ಶಿಕ್ಷಣ ಇಲಾಖೆಯ ಬಿಆರ್ಸಿ ಕೇಂದ್ರದಲ್ಲಿ ಶನಿವಾರ ನಡೆದ ತಾಲೂಕಿನ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ಶಾಲೆಗೆ ಬರುವ ವಾಹನದಲ್ಲಿ ಮಕ್ಕಳು ಕೂರಲು ಎಷ್ಟು ಆಸನಗಳಿವೆ. ಚಾಲಕ ಡಿಎಲ್ ಪಡೆದಿದ್ದಾನೆಯೇ ಹಾಗೂ ವಾಹನಕ್ಕೆ ವಿಮಾ ಸೌಲಭ್ಯ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು. ಪ್ರಯಾಣಿಸಬಹುದಾದ ಮಕ್ಕಳನ್ನು ಸಂಖ್ಯೆ ಮತ್ತು ಮಾಹಿತಿ ಸಂಗ್ರಹಿಸಬೇಕು ಎಂದರು.
ಶಾಲೆಗಳಿಗೆ ಮಕ್ಕಳನ್ನು ಕರೆತರುವಾಗ ಹಾಗೂ ಹೋಗುವಾಗ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮ ವಹಿಸಬೇಕಾಗುತ್ತದೆ. ಎಲ್ಲವೂ ಪೊಲೀಸರಿಂದಲೇ ಆಗಬೇಕೇನ್ನುವ ಬದಲು ಪೋಷಕರು ಮತ್ತು ಶಿಕ್ಷಕರಿಗೆ ತಮ್ಮ ಜವಾಬ್ದಾರಿಯನ್ನರಿಯಬೇಕು. ಎಲ್ಲದಕ್ಕೂ ಪೊಲೀಸರನ್ನೆ ಹೊಣೆಗಾರರನ್ನಾಗಿ ಮಾಡಬಾರದು ಎಂಬ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ. ಶಿವಶಂಕರಮೂರ್ತಿ, ಶಿಕ್ಷಣ ಸಂಯೋಜಕ ಪ್ರಕಾಶ್, ಪೇದೆ ಯೋಗೇಶ್ ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

