ಅಲಂಕಾರಕ್ಕೆ ಚಿನ್ನ ಬಳಕೆಯಿಂದ ಅಭಿವೃದ್ಧಿಗೆ ಹಿನ್ನಡೆ: ನೀಲಾ
ಕ.ಪ್ರ.ವಾರ್ತೆ ಮೈಸೂರು ಆ. 3
ಮಹಿಳೆಯರು ಚಿನ್ನಾಭರಣವನ್ನು ತಮ್ಮ ಅಲಂಕಾರಕ್ಕೆ ಬಳಸುವುದರಿಂದ ದೇಶದ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ ಹೇಳಿದರು.
ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟವು ಪೊಲೀಸ್ ಭವನದಲ್ಲಿ ಆಯೋಜಿಸಿರುವ ಮೂರು ದಿನಗಳ 9ನೇ ತ್ರೈವಾರ್ಷಿಕ ಮಹಾಧಿವೇಶನ ಅಂಗವಾಗಿ ಶನಿವಾರ ಸಂಜೆ ನಡೆದ ಮಹಿಳಾ ಉದ್ಯೋಗಿಗಳ ಸಮಾವೇಶದಲ್ಲಿ ಮಾತನಾಡಿ, ಚಿನ್ನಾಭರಣ, ಹಣವನ್ನು ಮಹಿಳೆಯರು ಉತ್ಪಾದನೆ ಕ್ಷೇತ್ರದಲ್ಲಿ ತೊಡಗಿಸಬೇಕು ಎಂದರು.
ಜೆಎಸ್ಎಸ್ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಎಂ.ಸಿ. ಸರೋಜಮ್ಮಣ್ಣಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಎಐಆರ್ಆರ್ಬಿಇಎ ಮಹಿಳಾ ಉಪ ಸಮಿತಿ ಸಂಚಾಲಕಿ ಮುನೀ ರಾಜನ್ ಅಧ್ಯಕ್ಷತೆ ವಹಿಸಿದ್ದರು. ಎನ್ಎಫ್ಆರ್ಆರ್ಬಿಇ ಪ್ರಧಾನ ಕಾರ್ಯದರ್ಶಿ ಶಿವಕರಣ್ ದ್ವಿವೇದಿ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಣಪತಿ ಹೆಗಡೆ, ಎಕೆಜಿಬಿಇಎಫ್ ಅಧ್ಯಕ್ಷ ಡಿ.ಐ. ಹೆಬಸೂರು, ಗೌರವ ಸಲಹೆಗಾರ ಎಸ್. ರೇವಣ್ಣ, ನಾಗಭೂಷಣ್ ಇದ್ದರು.
ಮೆರವಣಿಗೆ: ಇದಕ್ಕೂ ಮುನ್ನ ಮಹಾಧಿವೇಶನ ಅಂಗವಾಗಿ ಸಾವಿರಕ್ಕೂ ಹೆಚ್ಚಿನ ಬ್ಯಾಂಕ್ ನೌಕರರು ಮೆರವಣಿಗೆ ಹಮ್ಮಿಕೊಂಡಿದ್ದರು. ಮೆರವಣಿಗೆಯಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಹರಿದೇವ, ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್. ದಾಸೇಗೌಡ, ಮಹಾಧಿವೇಶನ ಸ್ವಾಗತ ಸಮಿತಿ ಸಂಚಾಲಕ ಎಚ್.ಪಿ. ಈರಪ್ಪಗೌಡ, ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಣಪತಿ ಹೆಗಡೆ ಭಾಗವಹಿಸಿದ್ದರು.
ಫಲಿತಾಂಶ ತಡೆ ವಿರೋಧಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಆ. 3
ಯುವರಾಜ ಕಾಲೇಜಿನ 72 ವಿದ್ಯಾರ್ಥಿಗಳ ಫಲಿತಾಂಶವನ್ನು ಹಾಜರಾತಿ ಕೊರತೆ ನೆಪವೊಡ್ಡಿ ತಡೆಹಿಡಿದಿರುವುದನ್ನು ಖಂಡಿಸಿ ಕನ್ನಡ ಹಿತರಕ್ಷಣಾ ವೇದಿಕೆಯವರು ಶನಿವಾರ ಪ್ರತಿಭಟಿಸಿದರು.
2012- 13ನೇ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ 72 ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆದಿದ್ದರೂ ಹಾಜರಾತಿ ಕೊರತೆ ನೆಪವೊಡ್ಡಿ ಫಲಿತಾಂಶ ತಡೆ ಹಿಡಿದಿರುವುದು ಸರಿಯಲ್ಲ. ಕಾಲೇಜಿನವರು ಹಾಜರಾತಿ ಕೊರತೆ ಇದ್ದರೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿ, ಈಗ ಫಲಿತಾಂಶ ತಡೆಹಿಡಿದಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಲಿದೆ ಎಂದು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ ಕಾಲೇಜು ಪ್ರಾಂಶುಪಾಲ ಡಾ.ಎಚ್. ನಂಜೇಗೌಡ ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ಈ ಸಂಬಂಧ ಮೈಸೂರು ವಿವಿ ಕುಲಪತಿ ಅವರನ್ನು ಭೇಟಿಯಾಗಿ ಚರ್ಚಿಸುತ್ತೇವೆ. ನಂತರ ಕಾಲೇಜು ಕೌನ್ಸಿಲ್ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಳಿಕ ಪ್ರತಿಭಟನೆ ಹಿಂಪಡೆದರು. ವೇದಿಕೆಯ ಅಧ್ಯಕ್ಷ ವಿ. ವಿನಯ್ಕುಮಾರ್, ಗೌರವಾಧ್ಯಕ್ಷ ವೀರಣ್ಣಗೌಡ, ಉಪಾಧ್ಯಕ್ಷ ದೇವರಾಜ್ ಟಿ. ಕಾಟೂರ್, ಮುಖಂಡರಾದ ಸೂರಿ, ನಿಶಾಂತ್, ಮಹೇಶ್, ದೀಪಕ್, ಕಿರಣ್ಕುಮಾರ್, ವಿನಯ್ಕುಮಾರ್, ರಂಜನ್, ಬಸವ, ಸುರೇಶ್, ನಿತಿನ್, ಸಂತೋಷ್, ಸೀನಪ್ಪ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

