ಕಾಂಗ್ರೆಸ್ ಗೆಲವಿಗೆ ಶ್ರಮಿಸಿ: ಮಂಜುನಾಥ್
ಕ.ಪ್ರ.ವಾರ್ತೆ ಹುಣಸೂರು ಆ. 6
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಯಲ್ಲಿ ತಾಲೂಕಿನ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿನ ಕಾಂಗ್ರೆಸ್ ಸದಸ್ಯರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈಬಲಪಡಿಸುವಂತೆ ಶಾಸಕ ಎಚ್.ಪಿ. ಮಂಜುನಾಥ್ ಮನವಿ ಮಾಡಿದರು.
ಪಟ್ಟಣದ ಪವನ್ಜಲ್ ಕಚೇರಿ ಆವರಣದಲ್ಲಿ ನಡೆದ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಧರ್ಮಸೇನರಿಗೆ ಮತ ನೀಡಬೇಕಿದೆ. ಪಕ್ಷದ ಅಭ್ಯರ್ಥಿ ಸೋತರೆ ಮುಖ್ಯಮಂತ್ರಿಗಳೇ ಸೋತಂತೆ ಎಂಬ ವಿಷಯ ಪಕ್ಷದ ಜನಪ್ರತಿನಿಧಿಗಳ ಮನದಲ್ಲಿರಲಿ ಎಂದರು.
ಪಕ್ಷದ ವೀಕ್ಷಕರಾಗಿ ಆಗಮಿಸಿದ್ದ ಅಕ್ಕಯ್ಯಮ್ಮ ಸೋಮಣ್ಣ, ಜಿಪಂ ಸದಸ್ಯೆ ಡಾ.ಪುಷ್ಪಾವತಿ ಅಮರನಾಥ್, ತಾ.ಅಧ್ಯಕ್ಷ ಬಿಳಿಕೆರೆ ಬಸವರಾಜ್, ತಾಪಂ ಸದಸ್ಯರಾದ ರಂಗಸ್ವಾಮಿ, ಪರಮೇಶ್ವರಿ, ಮುಖಂಡರಾದ ಜಿಪಂ ಮಾಜಿ ಸದಸ್ಯ ಡಿ.ಕೆ. ಕುನ್ನೇಗೌಡ, ಡಿಸಿಸಿ ಸದಸ್ಯ ಮಂಜಣ್ಣ, ಹಂದನಹಳ್ಳಿ ಸೋಮ ಶೇಖರ್, ರಾಮಕೃಷ್ಣೇಗೌಡ, ಹರಿಹರಾನಂದಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

