ಡೆಂಘೀ ಅರಿವು ಕಾರ್ಯಕ್ರಮ
ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಡೆಂಘೀ ಜ್ವರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಗೃಹರಕ್ಷಕ ದಳದ ಮುಖಂಡ ಮಹದೇವಪ್ಪ ಹೇಳಿದರು. ತಾಲೂಕಿನ ಹಲಗನಹಳ್ಳಿ ಗ್ರಾಮದ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಪರಿಸರ ಹಾಗೂ ಡೆಂಘೀ ಜ್ವರದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲೆ ಮತ್ತು ಮನೆಗಳ ಸುತ್ತಲಿನ ಪರಿಸರದ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ತಿಳಿಸಿದರು. ಬಿಸಿಎಂ ತಾಲೂಕು ಅಧಿಕಾರಿ ಸಿದ್ದೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಟಿ. ನರಸೀಪುರ: 2013-14ನೇ ಸಾಲಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರದಾನ ಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಆಸಕ್ತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರು ನಿಗದಿತ ಅವಧಿಯಲ್ಲಿ ಅಗತ್ಯ ದಾಖಲೆಗಳೊಡನೆ ತ್ರಿಪ್ರತಿಯಲ್ಲಿ ಅರ್ಜಿಯನ್ನು ಆ. 9ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ತಿಳಿಸಿದ್ದಾರೆ.
ಹುಣಸೂರಲ್ಲಿ ಎಚ್ಡಿಎಫ್ಸಿ ಶಾಖೆ
ಹುಣಸೂರು: ಎಚ್ಡಿಎಫ್ಸಿ ಬ್ಯಾಂಕ್ ತನ್ನ ಪ್ರಥಮ ಶಾಖೆಯನ್ನು ಪಟ್ಟಣದಲ್ಲಿ ಆರಂಭಿಸಿತು. ಇಲ್ಲಿನ ಪುರಸಭೆ ಅಧಿಕಾರಿ ಹರೀಶ್ ಮತ್ತು ಹಿರಿಯ ವೈದ್ಯ ಡಾ. ಶಿವಣ್ಣ ನೂತನ ಶಾಖೆ ಉದ್ಘಾಟಿಸಿದರು. ಶಾಖೆಯು ಗ್ರಾಹಕರಿಗೆ ಒಂದೇ ಸೂರಿನಡಿ ಮೂಲ ಸೇವೆಗಳಾದ ಉಳಿತಾಯ ಖಾತೆ, ನಿಶ್ಚಿತ ಠೇವಣಿ, ಚಾಲ್ತಿ ಖಾತೆ, ಮ್ಯೂಚುಯಲ್ ಫಂಡ್ಸ್, ವಿಮೆ, ದ್ವಿಚಕ್ರ ವಾಹನಗಳ ಸಾಲ, ಆಟೋ ಸಾಲಗಳಿಂದ ನೇರ ಪ್ರವೇಶದ ಬ್ಯಾಂಕಿಂಗ್ ವಾಹಕಗಳಾದ ಎಟಿಎಂ, ಫೋನ್ ಬ್ಯಾಂಕಿಂಗ್, ನೆಟ್ ಬ್ಯಾಂಕಿಂಗ್ ಮತ್ತು ಅಂತಾರಾಷ್ಟ್ರೀಯ ಕ್ರೆಡಿಟ್ ಕಾರ್ಡ್ಗಳವರೆಗೆ ವಿಶ್ವದರ್ಜೆಯ ಬ್ಯಾಂಕಿಂಗ್ ಸೇವೆಗಳನ್ನು ನೀಡುತ್ತದೆ ಎಂದು ಬ್ಯಾಂಕ್ನ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಮಾಧವರಾವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

