ಮಹಿಳೆ ಅನುಮಾನಾಸ್ಪದ ಸಾವು; ದೂರು ದಾಖಲು
ಮೈಸೂರು: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮಂಗಳವಾರ ಸಂಜೆ ಮೃತಪಟ್ಟಿದ್ದು, ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಜಯಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಮೈಸೂರು ತಾಲೂಕು ದೂರ ನಿವಾಸಿ ನಿಂಗಣ್ಣ ಎಂಬುವರ ಪತ್ನಿ ಜಗದಾಂಬ (27) ಮೃತಪಟ್ಟವರು. ಇವರಿಗೆ ವಿವಾಹವಾಗಿ 9 ವರ್ಷಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ಜಗದಾಂಬ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ನಿಂಗಣ್ಣ ಮತ್ತು ಅತ್ತೆ ಮಲ್ಲಮ್ಮ ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಜಗದಾಂಬ ಪೋಷಕರು ದೂರು ನೀಡಿದ್ದಾರೆ.
ಮೈಸೂರು ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ನೇಮಿರಾಜು, ಎಸ್ಐ ನಂಜಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಜಯಪುರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಜೂಜು: 10 ಮಂದಿ ಸೆರೆ: ಜೂಜಾಡುತ್ತಿದ್ದ 10 ಮಂದಿಯನ್ನು ಸರಸ್ವತಿಪುರಂ ಠಾಣೆ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ.ಟಿ.ಕೆ. ಬಡಾವಣೆಯಲ್ಲಿ ಜೂಜಾಡುತ್ತಿದ್ದ 10 ಮಂದಿಯನ್ನು ಬಂಧಿಸಿ ರು. 3220 ವಶಪಡಿಸಿಕೊಳ್ಳಲಾಗಿದೆ ಎಂದು ಕೆ.ಆರ್. ಉಪ ವಿಭಾಗದ ಎಸಿಪಿ ಎ.ಎನ್. ಪ್ರಕಾಶ್ಗೌಡ ತಿಳಿಸಿದ್ದಾರೆ.
ಸರಗಳ್ಳನ ಬಂಧನ: ಮಹಿಳೆಯೊಬ್ಬರ ಸರ ಅಪಹರಿಸಲು ಪ್ರಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

