ಮೈಸೂರು

ಇಬ್ಬರ ಬಂಧನ; ಆರು ಬೈಕ್ ವಶ

Published On :

ಮೈಸೂರು: ನಗರದ ಮಂಡಿ ಠಾಣೆ ಪೊಲೀಸರು ನಕಲಿ  ಕೀ ಬಳಸಿ ಬೈಕ್ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 2.18 ಲಕ್ಷ ರು. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಸುರೇಶ್ (30) ಮತ್ತು ಮಂಡಿ ಮೊಹಲ್ಲಾ ಚಿಕ್ಕವಲಕ್ಕಲಗೇರಿ ನಿವಾಸಿ ಗಿರೀಶ (23) ಬಂಧಿತ ಆರೋಪಿಗಳು. ಮಂಡಿ ಮೊಹಲ್ಲಾ ರಂಗಪಾಪಣ್ಣ ವೃತ್ತದ ಬಳಿ ಬೈಕುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸುರೇಶ ಮತ್ತು ಗಿರೀಶನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ನಕಲಿ ಕೀ ಬಳಸಿ ಬೈಕ್ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಇವರು ವಿವಿಧೆಡೆ ಕಳವು ಮಾಡಿದ್ದ 6 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಡಿಸಿಪಿ ಎಂ.ಎಂ. ಮಹದೇವಯ್ಯ, ಎನ್.ಆರ್. ಉಪ ವಿಭಾಗದ ಎಸಿಪಿ ಸಿ.ಡಿ. ಜಗದೀಶ್ ಮಾರ್ಗದರ್ಶನದಲ್ಲಿ ಮಂಡಿ ಠಾಣೆ ಇನ್ಸ್ಪೆಕ್ಟರ್ ಟಿ.ಬಿ. ರಾಜಣ್ಣ, ಎಸ್ಐ ಶಬ್ಬೀರ್ ಹುಸೇನ್ ಮತ್ತು ಸಿಬ್ಬಂದಿ ಈ ಪತ್ತೆ ಮಾಡಿದ್ದಾರೆ.
ಅಪರಿಚಿತರಿಬ್ಬರ ಅಕಾಲಿಕ ಸಾವು
ಮೈಸೂರು: ಎಂ.ಜಿ. ರಸ್ತೆ ಫುಟ್ಪಾತ್ನಲ್ಲಿ ಅಸ್ವಸ್ಥಗೊಂಡು ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದಾರೆ. ಚಹರೆ- 60 ವರ್ಷ, 5.8 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಬಿಸ್ಕೆಟ್ ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2418319 ಸಂಪರ್ಕಿಸಲು ಕೆ.ಆರ್. ಠಾಣೆ ಪೊಲೀಸರು ಕೋರಿದ್ದಾರೆ.
ವೃದ್ಧ ಸಾವು: ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ಲಯನ್ಸ್ ಶೆಲ್ಟರ್ ಬಳಿ ಅಪರಿಚಿತ ವ್ಯಕ್ತಿ ಬುಧವಾರ ಮೃತಪಟ್ಟಿದ್ದಾರೆ. ಚಹರೆ- 65 ವರ್ಷ, 5.3 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ಶರ್ಟ್, ನೀಲಿ ಜೀನ್ಸ್  ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2418306 ಸಂಪರ್ಕಿಸಲು ದೇವರಾಜ ಠಾಣೆ ಪೊಲೀಸರು ಕೋರಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.