ಮೈಸೂರು

ಕ್ಷುಲ್ಲಕ ಕಾರಣಕ್ಕೆ ಬೆಟ್ಟದಪುರದಲ್ಲಿ ಗುಂಪು ಘರ್ಷಣೆ

Published On :


ಕ.ಪ್ರ.ವಾರ್ತೆ     ಪಿರಿಯಾಪಟ್ಟಣ     ಆ. 9
ರಂಜಾನ್ ಹಬ್ಬದ ಪ್ರಾರ್ಥನೆ ನಂತರ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಈದ್ಗಾ ಮೈದಾನದಲ್ಲಿ ರಂಜಾನ್ ಅಂಗವಾಗಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ನಡೆಸಿದ ಬಳಿಕ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಘರ್ಷಣೆಯನ್ನು ತಹಬದಿಗೆ ತಂದಿದ್ದಾರೆ.
ಗ್ರಾಮದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ ನಂತರ, ಸ್ಮಶಾನದಲ್ಲಿ ಹಿರಿಯರಿಗೆ ದುವ ಸಲ್ಲಿಸುವ ಅಂಗವಾಗಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದವರೆಲ್ಲ ತೆರಳಿದರು. ಈ ವೇಳೆ ಸಮುದಾಯದ ಗುರುಗಳು ದುವ ಸಲ್ಲಿಸಲು ಬಾರದೆ ಮಸೀದಿಗೆ ತೆರಳಿದ್ದಾರೆ. ಇದರಿಂದ ಬೇಸರಗೊಂಡ ಗುಂಪೊಂದು ಮಸೀದಿಗೆ ತೆರಳಿ ದುವ ಸಲ್ಲಿಸಲು ಗುರುಗಳು ಬಾರದಿರುವ ಬಗ್ಗೆ ಗುರುಗಳನ್ನು ಪ್ರಶ್ನಿಸಿದರು.
ಈ ವೇಳೆ ಮತ್ತೊಂದು ಗುಂಪು ಗುರುಗಳ ಪರ ಮಾತನಾಡಿದ್ದು, ಇದರಿಂದಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತ ತಲುಪಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಗಮನಿಸಿದ ಪೊಲೀಸರು ಮಧ್ಯಪ್ರವೇಶಿಸಿ ಎರಡು ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಮುಂಜಾಗ್ರತಾ ಕ್ರಮವಾಗಿ ಸರ್ಕಲ್ ಇನ್‌ಸ್ಪೆಕ್ಟರ್ ಪಿ.ವಿ. ವೆಂಕಟೇಶ್, ಎಸ್‌ಐ ಜಿ.ಜೆ. ಸತೀಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಹೆಚ್ಚಿನ ಭದ್ರತೆಗಾಗಿ ಡಿಆರ್ ನಿಯೋಜಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.