ಆಕಸ್ಮಿಕ ಬೆಂಕಿ ತಗುಲಿ ವಿದ್ಯಾರ್ಥಿನಿ ಸಾವು
ಹುಣಸೂರು: ಆಕಸ್ಮಿಕ ಬೆಂಕಿ ತಗುಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾರೆ. ತಾಲೂಕಿನ ಸೋಮನಹಳ್ಳಿಯ ವೈರಮುಡಯ್ಯರ ಪುತ್ರಿ ಪೂಜಾ (17) ಮೃತಪಟ್ಟವರು. ಈಕೆ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಮಂಗಳವಾರ ಮನೆಯಲ್ಲಿ ನೀರು ಕಾಯಿಸಲು ತೆಂಗಿನಗರಿಯಿಂದ ಓಲೆ ಹಚ್ಚುವಾಗ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿ ತೀವ್ರ ಗಾಯಗೊಂಡಿದ್ದ ಆಕೆಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿವಾಸಿಗಳಿಗೆ ಹಕ್ಕು: ಆಗ್ರಹ
ಹುಣಸೂರು: ಅರಣ್ಯ ಹಕ್ಕುಗಳ ಮಾನ್ಯತಾ ಕಾಯ್ದೆ 2006-08ರ ಅನ್ವಯ ಗಿರಿಜನರ ಪಾರಂಪರಿಕ ಹಕ್ಕುಗಳನ್ನು ಜಿಲ್ಲಾಧಿಕಾರಿಗಳು ಮಾನ್ಯ ಮಾಡಿ ಹಕ್ಕುಪತ್ರ ನೀಡಬೇಕೆಂದು ನಾಗರಹೊಳೆ ಬುಡಕಟ್ಟು ಹಕ್ಕು ಸ್ಥಾಪನಾ ಸಮಿತಿ ಸಂಚಾಲಕ ಪಿ.ಕೆ. ರಾಮು ಒತ್ತಾಯಿಸಿದ್ದಾರೆ. ಎಚ್.ಡಿ. ಕೋಟೆ ತಾಲೂಕಿನ 14 ಹಾಡಿ ಹಾಗೂ ಪಿರಿಯಾಪಟ್ಟಣ ತಾಲೂಕಿನ 5 ಹಾಡಿಗಳಿಗೆ ಮಾತ್ರ ಸಾಮೂಹಿಕ ಹಕ್ಕುಪತ್ರ ವಿತರಿಸಲಾಗಿದೆ. ಉಳಿದ ಹಾಡಿಗಳಿಗೆ ಹಕ್ಕುಪತ್ರ ನೀಡಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಖಂಡಿಸಿದ್ದಾರೆ. ಈ ಕಾಯ್ದೆ ಜಾರಿಯಾಗಿ ಆರು ವರ್ಷ ಕಳೆದಿದೆ. ಆದರೆ ಆದಿವಾಸಿ ಸಮುದಾಯಗಳ ಪಾರಂಪರಿಕ ಪಿತ್ರಾರ್ಜಿತ ಆಸ್ತಿಗೆ ಹಕ್ಕುಪತ್ರ ನೀಡಲು ವಿಳಂಬ ಮಾಡಲಾಗುತ್ತಿದ್ದು, ಆದಿವಾಸಿಗಳು ಸ್ವತಂತ್ರ ಬದುಕನ್ನು ಕಿತ್ತುಕೊಂಡಂತಾಗಿದೆ. ಬರುವ ಆ.15ರ ಸ್ವಾತಂತ್ರೋತ್ಸವದೊಳಗೆ ಸಾಮೂಹಿಕ ಹಕ್ಕುಪತ್ರಗಳನ್ನು ನೀಡಬೇಕೆಂದು ಕೋರಿದ್ದಾರೆ.
ಜೆಎಸ್ಎಸ್ ಪಾಲಿಟೆಕ್ನಿಕ್ಗೆ ಅರ್ಜಿ
ನಂಜನಗೂಡು: ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ನ ಡಿಪ್ಲೊಮಾ ಕೋರ್ಸ್ಗಳಲ್ಲಿ ಕೆಲವು ಸೀಟುಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಕಾರಿ ನಿಯಮಾನಳಿ ಪ್ರಕಾರ ಸೀಟು ನೀಡಲಾಗುವುದು. ಆ.14 ರೊಳಗೆ 96866 77234 ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

