ಮೈಸೂರು

ವಿದ್ಯಾರ್ಥಿಗಳು ಸಾಧನೆಯತ್ತ ಹೆಜ್ಜೆ ಇಡಲಿ: ಚಿಕ್ಕಮಾದು

Published On :

ಕ.ಪ್ರ.ವಾರ್ತೆ    ಎಚ್.ಡಿ.ಕೋಟೆ    ಆ. 10
ವಿದ್ಯಾರ್ಥಿಗಳು ಧೈರ್ಯದಿಂದ ಸಾಧನೆಯತ್ತ ಹೆಜ್ಜೆ ಇಡಬೇಕು ಎಂದು ಶಾಸಕ ಎಸ್. ಚಿಕ್ಕಮಾದು ಕರೆ ನೀಡಿದರು.
ತಾಲೂಕಿನ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿರುವ ಸದಸ್ಯರಿಗೆ ದಿ. ನಂಜುಂಡಪ್ಪ ಅವರ ಸ್ಮರಣಾರ್ಥ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಗ್ರಾಮಾಂತರ ಮಕ್ಕಳಲ್ಲಿ ಪ್ರತಿಭೆ ಇರುತ್ತದೆ. ಅಂತಹವರಿಗೆ ಬೇಕಾದ ಪ್ರೋತ್ಸಾಹ ಮತ್ತು ಅವಕಾಶ ನೀಡಬೇಕು. ಇಂತಹ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯ ಪತ್ರಕರ್ತರ ಸಂಘ ಮಾಡುತ್ತಿರುವುದು ಮೆಚ್ಚುವಂತ ವಿಚಾರ ಎಂದು ಹೇಳಿದರು.
ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಎಚ್.ಡಿ. ಕೋಟೆ ತಾಲೂಕಿನ ಪತ್ರಕರ್ತರಲ್ಲಿನ ಒಗ್ಗಟ್ಟು ಮಾದರಿಯಾಗಿರುವಂತಹದ್ದು. ಇದು ಪ್ರಜಾಪ್ರಭುತ್ವದಲ್ಲಿ ಬಹಳ ಮಹತ್ವವಾದದ್ದು. ವಿವಿಧ ಜನಪರ ಚಟುವಟಿಕೆಗಳಿಗೆ ಧ್ವನಿಯಾಗಿ ಸಮಾಜದ ಹಲವಾರು ಸ್ಥರಗಳಲ್ಲಿ ತಮ್ಮದೆ ಆದ ಛಾಪನ್ನು ಮೂಡಿಸಿರುವ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದ ಕಾರ್ಯ ಪತ್ರಿಕಾರಂಗದ್ದು ಎಂದು ತಿಳಿಸಿದರು.
ದಿ. ನಂಜುಂಡಪ್ಪನವರ ಸ್ಮರಣಾರ್ಥ ನಾಗರಾಮ್ ಮತ್ತು ಸಂಘದ ಪರವಾಗಿ ಶ್ರೀನಿಧಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶಶಾಂಕ್, ಎಸ್.ಎನ್. ಗೋವಿಂದರಾಜು, ಎಸ್. ಭಾರತಿ ಸ ಅವರನ್ನು ನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮಂಜು ಕೋಟೆ, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಾಜು ಸಾಗರ್, ಪ್ರಧಾನ ಕಾರ್ಯದರ್ಶಿ ಕನ್ನಡ ಪ್ರಮೋದ್, ಉಪಾಧ್ಯಕ್ಷ ಬೀಚನಹಳ್ಳಿ ಮಂಜು, ಬಸವರಾಜು, ರವಿಕುಮಾರ್, ಸಿ.ಎನ್. ರಘು, ಜಿ. ರವಿಕುಮಾರ್, ನಂದಕುಮಾರ್, ಅಂಕನಾಯಕ, ಸತೀಶ್ ಆರಾಧ್ಯ, ಶರವಣ, ರಾಜೇಶ್, ಆನಂದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.