ವೈದ್ಯರು ರೋಗಿಯೆಡೆಗೆ ಅಂತಃಕರಣ ತೋರಲಿ
ಮೈಸೂರು: ವೈದ್ಯರು ರೋಗಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣಬೇಕು. ಆಗ ಮಾತ್ರ ಅವರ ಅಂತಃಕರಣ ಮಿಡಿಯುತ್ತದೆ ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲನಾಂದನಾಥ ಸ್ವಾಮೀಜಿ ಕಿವಿಮಾತು ಹೇಳಿದರು.
ಭಾನುವಾರ ನಗರದ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ಏರ್ಪಡಿಸಿದ್ದ ಅಪೋಲೋ ಬಿಜಿಎಸ್ ಆಸ್ಪತ್ರೆಯ 13ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಬಡವರಿಗೂ ಯೋಜನೆ: ಆದಿಚುಂಚನಗಿರಿ ಸಂಸ್ಥೆಯ ಆಸ್ಪತ್ರೆ ಶ್ರೀಮಂತರಿಗೆ ಮಾತ್ರ ಸೀಮಿತ ಎಂಬ ಭಾವನೆ ಸಲ್ಲ. ಬಡವರಿಗೂ ಹಲವಾರು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.
ಕಳೆದ 13 ವರ್ಷಗಳಿಂದ ಆಸ್ಪತ್ರೆಯಿಂದ ಉತ್ತಮ ಸೇವೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಕ್ರೀಡಾ ಚಿಕಿತ್ಸಾ ಘಟಕ ಸ್ಥಾಪನೆಯಾಗಲಿ: ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮಾತನಾಡಿ, ನಮ್ಮ ಮನೆಯ ಪಕ್ಕದಲ್ಲೇ ಇರುವ ಅಪೋಲೋ ಬಿಜಿಎಸ್ ಆಸ್ಪತ್ರೆ ಉತ್ತಮ ಸೇವೆ ನೀಡುತ್ತಿದೆ. ನಮ್ಮ ತಂದೆ ತಾಯಿ ಆದಿಯಾಗಿ ನಮ್ಮ ಕುಟುಂಬದವರೆಲ್ಲರೂ ಇಲ್ಲಿಗೆ ಬರುತ್ತಿದ್ದೇವೆ ಎಂದರು.
ಇತ್ತೀಚಿನ ದಿನಗಳಲ್ಲಿ ಕ್ರೀಡೆಯನ್ನು ವೃತ್ತಿಯನ್ನಾಗಿ ಸ್ವೀಕರಿಸುವ ಪ್ರವೃತ್ತಿ ಬೆಳೆಯುತ್ತಿದೆ. ಆದರೆ, ಅಂತಹ ಕ್ರೀಡಾಪಟುಗಳಿಗೆ ಸಣ್ಣ ಪುಟ್ಟ ಗಾಯಗಳಾದರು ಅದಕ್ಕೆ ಸೂಕ್ತ ಚಿಕಿತ್ಸೆ ಇಲ್ಲದೆ ಅವರ ಕ್ರೀಡಾ ಜೀವನವೇ ಅಂತ್ಯವಾಗುವ ಅನೇಕ ಸನ್ನಿವೇಶ ಎದುರಾಗುತ್ತಿವೆ. ಆದ್ದರಿಂದ ಶ್ರೀಗಳು ಈ ಆಸ್ಪತ್ರೆಯಲ್ಲಿ ಕ್ರೀಡಾಪಟುಗಳಿಗಾಗಿಯೇ ಪ್ರತ್ಯೇಕ ಘಟಕ ತೆರೆದು ಕ್ರೀಡೆಯನ್ನು ಪ್ರೋತ್ಸಾಹಿಸುವಂತೆ ಕೋರಿದರು.
ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಪತ್ರಿಕೋದ್ಯಮಿ ರಾಜಶೇಖರ ಕೋಟಿ, ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಎಎಚ್ಇಎಲ್ ಕೇಂದ್ರ ವಲಯ ಸಿಇಒ ಡಾ. ಹರಿಪ್ರಸಾದ್, ಕರ್ನಾಟಕ ವಲಯ ಸಿಇಒ ಡಾ. ಉಮಾಪತಿ ಪಾನ್ಯಾಲ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

